ಬೆಂಗಳೂರು: ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರ ವಿರಾಜಪೇಟೆಯಲ್ಲಿರುವ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ. ಆದರೆ ಈ ಸಂಬಂಧ ರಶ್ಮಿಕಾ ಮತ್ತು ಆದಾಯ ತೆರಿಗೆ ಇಲಾಖೆ ಇದುವರೆಗೆ ಅಧಿಕೃತ ಹೇಳಿಕೆ ನೀಡಿಲ್ಲ. ಬೆಳಿಗ್ಗೆ 7.30ರ ಹೊತ್ತಿಗೆ ಕಾರಿನಲ್ಲಿ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳು ಮನೆಯಲ್ಲಿ ದಾಖಲೆ ಪರಿಶೀಲನೆಯಲ್ಲಿ ನಿರತರಾಗಿದ್ದಾರೆ. ರಶ್ಮಿಕಾ ತೆಲುಗಿನಲ್ಲಿ ಅತ್ಯಧಿಕ ಬೇಡಿಕೆಯ ನಟಿಯಾಗಿದ್ದಾರೆ. ಮಹೇಶ್ ಬಾಬು ಜೊತೆ ನಟಿಸಿರುವ ಚಿತ್ರ ಇತ್ತೀಚೆಗೆ ಬಿಡುಗಡೆಯಾಗಿದ್ದು, ಉತ್ತಮ ಆದಾಯ ಗಳಿಸುತ್ತಿದೆ.