Saturday, November 26, 2022

ಮಕ್ಕಳಲ್ಲಿ‌ ಹೆಚ್ಚಿದ ಕೊರೋನಾ: ಒಂದೇ ತಿಂಗಳಲ್ಲಿ ರಾಜ್ಯದ 50 ಸಾವಿರ ಮಕ್ಕಳಿಗೆ ಸೋಂಕು

Follow Us

newsics.com

ಬೆಂಗಳೂರು: ಕರ್ನಾಟಕಕ್ಕೆ ಆಗಲೇ‌ ಕೊರೋನಾ ಮೂರನೇ ಅಲೆ ಅಪ್ಪಳಿಸಿದೆಯೇ ಎನ್ನುವ ಅನುಮಾನ‌ ಹುಟ್ಟುವ ರೀತಿಯಲ್ಲಿ ಕೊರೋನಾ ಸೋಂಕು ಮಕ್ಕಳನ್ನು ಕಾಡುತ್ತಿದೆ.

ಕಳೆದೊಂದು ತಿಂಗಳಲ್ಲಿ ಐವತ್ತು ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಕೊರೋನಾ ಸೋಂಕು ತಗುಲಿದೆ. 44‌ ಮಕ್ಕಳು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ರಾಜ್ಯಕ್ಕೆ ಕೊರೋನಾ ಕಾಲಿಟ್ಟ 15 ತಿಂಗಳ ಪೈಕಿ ಕಳೆದ 30 ದಿನದಲ್ಲಿ ಮಕ್ಕಳಲ್ಲಿ ಗರಿಷ್ಠ ಸಾವು ಮತ್ತು ಸೋಂಕಿನ ಸಂಖ್ಯೆ ವರದಿಯಾಗಿದೆ. ಅನ್‌ಲಾಕ್‌ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೆ ಬೆಂಗಳೂರು ನಗರ, ಮೈಸೂರು, ರಾಮನಗರ, ಮಂಡ್ಯ, ಚಿಕ್ಕಬಳ್ಳಾಪುರ, ಗದಗ ಜಿಲ್ಲೆಗಳಲ್ಲಿ ಮಕ್ಕಳಲ್ಲಿನ ಸೋಂಕಿನ ಪ್ರಕರಣ ಕೂಡ ಭಾರಿ ಏರಿಕೆ ಆಗುತ್ತಿದೆ. ರಾಜ್ಯದಲ್ಲಿ ಕಳೆದ ಹತ್ತು ದಿನಗಳಿಂದ ಪ್ರತಿದಿನ ಸರಾಸರಿ 700 ಮಕ್ಕಳಲ್ಲಿ ಕೋವಿಡ್‌ ಸೋಂಕು ಪತ್ತೆಯಾಗುತ್ತಿದೆ.

ಮೇ 20ರ ಹೊತ್ತಿಗೆ ರಾಜ್ಯದಲ್ಲಿ 9 ವರ್ಷದೊಳಗಿನ ಒಟ್ಟು 68,635 ಮತ್ತು 10 ರಿಂದ 18 ವರ್ಷದೊಳಗಿನ 1,73,286 ಮಕ್ಕಳು ಕೋವಿಡ್‌ನಿಂದ ಬಾಧಿತರಾಗಿದ್ದರು. ಒಟ್ಟು 106 ಮಕ್ಕಳು ಮೃತಪಟ್ಟಿದ್ದರು. ಅದೇ ಜೂನ್‌ 20ರ ಹೊತ್ತಿಗೆ ಮತ್ತೆ 12 ಸಾವಿರ ಎಳೆಯ ಮಕ್ಕಳು ಮತ್ತು 10 ವರ್ಷ ಮೇಲ್ಟಟ್ಟ 40 ಸಾವಿರಕ್ಕೂ ಮಕ್ಕಳಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!