newsics.com
ಬೆಂಗಳೂರು: ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದ ಕೆಲವೊಂದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮತ್ತು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಸಾವಿರಾರು ಮನೆಗಳಿಗೆ ನೀರು ನುಗ್ಗಿ ನಿತ್ಯ ಬಳಕೆಯ ವಸ್ತುಗಳು ಹಾಳಾಗಿದೆ. ಅಲ್ಲದೆ ನೂರಾರು ವಾಹನಗಳು ನೀರಿನಲ್ಲಿ ಮುಳುಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.ಮಳೆಯ ಸಮಯದಲ್ಲಿ ಈ ರೀತಿಯಾಗಿ ತೊಂದರೆಯಾಗುತ್ತಿದ್ದರೂ, ಈ ಸಮಸ್ಯೆಯನ್ನು ಬಗೆಹರಿಸದ ಸರ್ಕಾರ ಮತ್ತು ಬಿಬಿಎಂಪಿ ವಿರುದ್ಧ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.