Tuesday, April 13, 2021

ಬೆಂಗಳೂರಲ್ಲಿ ಹೆಚ್ಚಿದ ಆತಂಕ, ಒಂದೇ ದಿನ 7 ವಾರ್ಡ್ ಕಂಟೈನ್ಮೆಂಟ್ ವಲಯಕ್ಕೆ ಸೇರ್ಪಡೆ

ಬೆಂಗಳೂರು: ಲಾಕ್ ಡೌನ್ ತೆರವಾಗುತ್ತಿದ್ದಂತೆಯೇ ರಾಜಧಾನಿ ಬೆಂಗಳೂರಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಲೇ ಇದೆ.
ಜತೆಗೆ ಕಂಟೈನ್ಮೆಂಟ್ ಪ್ರದೇಶ ಕೂಡ ಹೆಚ್ಚಿದ್ದು, ಈಗ ಬಿಬಿಎಂಪಿ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ವಲಯಗಳ ಸಂಖ್ಯೆ 31ಕ್ಕೇರಿಕೆಯಾಗಿದೆ. ಕಳೆದ ಒಂದೇ ದಿನದಲ್ಲಿ 7 ವಾರ್ಡ್ ಗಳು ಕಂಟೈನ್ಮೆಂಟ್ ವಲಯಕ್ಕೆ ಸೇರ್ಪಡೆಯಾಗಿವೆ.
ದಾಸರಹಳ್ಳಿ, ಬೊಮ್ಮನಹಳ್ಳಿ ವಲಯದ ಎಚ್‌ಎಸ್‌ಆರ್‌ ಬಡಾವಣೆ ಮತ್ತು ಬೊಮ್ಮನಹಳ್ಳಿ ವಾರ್ಡ್‌, ಮಹದೇವಪುರ ವಲಯದ ಕಾಡುಗೋಡಿ, ಪೂರ್ವ ವಲಯದ ಅಗರ, ದಕ್ಷಿಣ ವಲಯದ ಸಿದ್ದಾಪುರ, ಹೊಸಹಳ್ಳಿ ಹಾಗೂ ದಾಸರಹಳ್ಳಿ ವಲಯದ ಚೊಕ್ಕಸಂದ್ರ ವಾರ್ಡ್ ಗಳಲ್ಲಿ ಕೊರೋನಾ ಸೋಂಕಿತರು ಕಾಣಿಸಿಕೊಂಡಿದ್ದರಿಂದ ಕಂಟೈನ್‌ಮೆಂಟ್‌ ಪ್ರದೇಶಗಳಾಗಿ ಗುರುತಿಸಿಕೊಂಡಿವೆ. ಕಳೆದ ಕೆಲ ದಿನಗಳಿಂದ ಯಾವುದೇ ಪ್ರಕರಣ ಪತ್ತೆಯಾಗದ ಹಿನ್ನೆಲೆಯಲ್ಲಿ ಕೆ.ಆರ್‌.ಮಾರುಕಟ್ಟೆ ವಾರ್ಡ್‌, ಬೇಗೂರು ವಾರ್ಡ್‌ ಹಾಗೂ ಬಿಟಿಎಂ ಬಡಾವಣೆ ಕಂಟೈನ್ಮೆಂಟ್ ಪಟ್ಟಿಯಿಂದ ಹೊರಗುಳಿಯಲಿವೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!