Friday, September 30, 2022

ಮಂಕಿಪಾಕ್ಸ್‌ ಭೀತಿ : ಕರ್ನಾಟಕದಲ್ಲಿ ಹೈ ಅಲರ್ಟ್

Follow Us

newsics.com

ಬೆಂಗಳೂರು : ಹಲವು ದೇಶಗಳಲ್ಲಿ ಈಗಾಗಲೇ ಮಂಕಿಪಾಕ್ಸ್‌ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಕೇಂದ್ರ ಸರಕಾರದ ಸೂಚನೆಯ ಹಿನ್ನೆಲೆಯಲ್ಲಿ ಇದೀಗ ಕರ್ನಾಟಕದಲ್ಲಿಯೂ ಕಟ್ಟೆಚ್ಚರ ವಹಿಸುವಂತೆ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿಯನ್ನು ಹೊರಡಿಸಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್‌ ಅವರು ಟ್ವೀಟ್‌ ಮಾಡಿದ್ದಾರೆ.

ಶಂಕಿತ ಮಂಕಿಪಾಕ್ಸ್‌ ಪ್ರಕರಣ ಪತ್ತೆಯಾದ ಸಂದರ್ಭದಲ್ಲಿ ಸೊಂಕಿತನ ರಕ್ತ ಮಾದರಿಗಳನ್ನು ಸಂಗ್ರಹಿಸಿ ಪುಣೆಯಲ್ಲಿರುವ ನ್ಯಾಷನಲ್‌ ಇನ್ಷ್ಟಿಟ್ಯೂಟ್‌ ಆಫ್‌ ವೈರಾಲಜಿ ಲ್ಯಾಬ್‌ಗೆ ಕಳುಹಿಸಿಕೊಡಲು ಸೂಚಿಸಲಾಗಿದೆ. ಮತ್ತು ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್‌ ಕುಮಾರ್‌ ಅವರು ಆದೇಶದಲ್ಲಿ ತಿಳಿಸಿದ್ದಾರೆ.

RSS ಪರ ಬ್ಯಾಟಿಂಗ್ ಮಾಡದಂತೆ ರಾಜ್ಯ ಬಿಜೆಪಿಗೆ ಸಂಘ ಸೂಚನೆ?

ಮತ್ತಷ್ಟು ಸುದ್ದಿಗಳು

vertical

Latest News

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್,...

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...
- Advertisement -
error: Content is protected !!