newsics.com
ಬೆಂಗಳೂರು: ರಾಜ್ಯದಲ್ಲಿ ಅಕಾಲಿಕ ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆಯಾಗಿದ್ದು, 10 ದಿನಗಳಲ್ಲಿ 112 ಮಂದಿಗೆ ದೃಢಪಟ್ಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,418 ಕ್ಕೆ ಏರಿಕೆಯಾಗಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು 28,000 ಕ್ಕೂ ಹೆಚ್ಚು ಮಂದಿಯಲ್ಲಿ ಡೆಂಗ್ಯೂ ಲಕ್ಷಣಗಳು ಕಾಣಿಸಿದ್ದು, ತಪಾಸಣೆಗೆ ಒಳಪಡಿಸಲಾಗಿದೆ.
ಈ ಜ್ವರ ಅಕಾಲಿಕ ಮಳೆಯಿಂದ ಕೆಲವರಲ್ಲಿ ಕಾಣಿಸಿಕೊಳ್ಳುತ್ತಿದ್ದು, ವಿವಿಧ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಇದನ್ನು ತಡೆಯಬಹುದಾಗಿದೆ.