Saturday, April 17, 2021

ಬೆಂಗಳೂರಿನಲ್ಲಿ ಕೊರೋನಾ ಹೆಚ್ಚಳ: ತುರ್ತು ಸಭೆ ಕರೆದ ಸಿಎಂ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣದಲ್ಲಿ ಭಾರೀ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಹಿರಿಯ ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಧ್ಯಾಹ್ನ ಸಭೆ ನಡೆಯಲಿದೆ. ಬಿಬಿಎಂಪಿ, ಆರೋಗ್ಯ ಮತ್ತು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಲಾಸಿಪಾಳ್ಯ ಮಾರುಕಟ್ಟೆ ಮತ್ತು ಕೆ. ಆರ್ ಮಾರುಕಟ್ಟೆಯಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿರುವುದು ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಪರ್ಯಾಯ ಕ್ರಮಗಳನ್ನು ಸೂಚಿಸುವ ಸಾಧ್ಯತೆಯಿದೆ. ಬೆಂಗಳೂರಿನ ಜನ ನಿಬಿಡ  ಚಿಕ್ಕಪೇಟೆ ಮತ್ತೆ ಸೀಲ್ ಡೌನ್ ಮಾಡುವ ಸಾಧ್ಯತೆ ಕೂಡ ಇದೆ ಎಂದು ಹೇಳಲಾಗುತ್ತಿದೆ. ಕಂಟೇನ್ ಮೆಂಟ್ ವಲಯದಲ್ಲಿ ಜನರು ಯಾವುದೇ ಮುನ್ನೆಚ್ಚರಿಕೆ ವಹಿಸದೆ ಅಸಡ್ಡೆ ತೋರುತ್ತಿರುವುದು ಕೂಡ ಕೊರೋನಾ ಹೆಚ್ಚಳಕ್ಕೆ ಪ್ರಮುಖ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!