Wednesday, July 6, 2022

ಒಂದೇ ದಿನ 8 ಗರ್ಭಿಣಿಯರಿಗೆ ಸೋಂಕು, 20ಕ್ಕೂ ಹೆಚ್ಚು ಬಾಣಂತಿಯರು ಕ್ವಾರಂಟೈನ್

Follow Us

ಬೆಳಗಾವಿ: ಗೋಕಾಕ್’ನಲ್ಲಿ ಒಂದೇ ದಿನ 8 ಗರ್ಭಿಣಿಯರಲ್ಲಿ ಸೋಂಕು ಪತ್ತೆಯಾಗಿದ್ದು, ಗೋಕಾಕ್ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಒಂದೇ ದಿನ 8 ಗರ್ಭಿಣಿಯರಲ್ಲಿ ಮಾರಕ ಕೊರೋನಾ ಸೋಂಕು ಪಾಸಿಟಿವ್ ಬಂದಿದೆ. ಹೀಗಾಗಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಹಾಗೂ ಸಿಬ್ಬಂದಿಯಲ್ಲೂ ಆಥಂಕ ಆತಂಕ ಮನೆಮಾಡಿದೆ. ಇದೇ ವೇಳೆ, ಆಸ್ಪತ್ರೆಯ ಬಾಣಂತಿಯರಿಗೂ ಸೋಂಕು ತಗುಲಿದ ಭೀತಿ ಎದುರಾಗಿದೆ. ಹೀಗಾಗಿ ಆಸ್ಪತ್ರೆಯಲ್ಲಿರುವ ಸುಮಾರು 20ಕ್ಕೂ ಹೆಚ್ಚು ಬಾಣಂತಿಯರಿಗೆ ಕ್ವಾರಂಟೈನ್ ಮಾಡಲಾಗಿದ್ದು, ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಬೆಳಗಾವಿ ಆರೋಗ್ಯ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ, ...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...
- Advertisement -
error: Content is protected !!