Tuesday, April 13, 2021

ಸಿದ್ಧಗಂಗಾ ಮಠದ SSLC ವಿದ್ಯಾರ್ಥಿಗೆ ಸೋಂಕು, ನೂರಾರು ವಿದ್ಯಾರ್ಥಿಗಳಿಗೆ ಆತಂಕ

ತುಮಕೂರು/ ಬೆಂಗಳೂರು: ಸಿದ್ಧಗಂಗಾ ಮಠದಲ್ಲಿ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿರುವ ಆಂಧ್ರಪ್ರದೇಶದ ಕರ್ನೂಲ್ ಮೂಲದ ವಿದ್ಯಾರ್ಥಿಯೊಬ್ಬನಿಗೆ ಕೊರೋನಾ ಸೋಂಕು ತಗುಲಿದೆ.
ಹೀಗಾಗಿ ಮಠದಲ್ಲಿ ವ್ಯಾಸಂಗ ಮಾಡುತ್ತಿರುವ 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಆತಂಕ ಶುರುವಾಗಿದೆ. ಸೋಂಕಿನ ಹಿನ್ನೆಲೆಯಲ್ಲಿ ಮೂವರು ವಿದ್ಯಾರ್ಥಿಗಳನ್ನು ಈಗಾಗಲೇ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.
ಈ ವಿದ್ಯಾರ್ಥಿ ಜೂನ್ 15ರಂದು ಮಠಕ್ಕೆ ಬಂದಿದ್ದು ಆತನಲ್ಲಿ ಯಾವುದೇ ರೋಗಲಕ್ಷಣವಿರಲಿಲ್ಲ. ಆದರೆ, ಕರ್ನೂಲ್ ಜಿಲ್ಲಾಡಳಿತ ಕೊರೋನಾ ಸೋಂಕಿರುವ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾಡಳಿತದ ಅಧಿಕಾರಿಗಳು ತಕ್ಷಣ ಆತನನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ಮತ್ತೊಮ್ಮೆ ಗಂಟಲು ದ್ರವದ ಮಾದರಿ ಸಂಗ್ರಹಿಸಿದ್ದು, ಪರೀಕ್ಷೆಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. 4 ದಿನಗಳಿಂದ ಈ ಪಾಸಿಟಿವ್ ವಿದ್ಯಾರ್ಥಿಯು ಇತರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಜತೆ ಬೆರೆತಿದ್ದಾನೆ. ಎಲ್ಲಾ ವಿದ್ಯಾರ್ಥಿಗಳ ಜತೆ ಒಟ್ಟಿಗೆ ಕುಳಿತು ಊಟ ಮಾಡಿದ್ದಾನೆ. ಶೌಚ, ಸ್ನಾನ ಗೃಹ ಕೂಡ ಬಳಸಿದ್ದಾನೆ. ಇದು ಈಗ ಇತರ ಎಲ್ಲರಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಈತನಿದ್ದ ಕಟ್ಟಡದಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಸವಿದ್ದರು ಎಂದು ತಿಳಿದುಬಂದಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!