Monday, August 8, 2022

ಆಂಕರ್ ಅನುಶ್ರೀಗೆ ಸಮನ್ಸ್ ನೀಡಿದ್ದ ಇನ್ಸ್’ಪೆಕ್ಟರ್ ವರ್ಗ

Follow Us

newsics.com
ಮಂಗಳೂರು: ಆಂಕರ್ ಅನುಶ್ರೀ ಅವರಿಗೆ ಸಮನ್ಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದ ಮಂಗಳೂರು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಇನ್ಸ್’ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ.
ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದ್ದು, ಲೋಕಾಯುಕ್ತಕ್ಕೆ ಕಳುಹಿಸಲಾಗಿದೆ.
ಇನ್ಸ್ ಪೆಕ್ಟರ್ ಶಿವಪ್ರಕಾಶ್ ಅವರ ಸ್ಥಾನಕ್ಕೆ ಉಡುಪಿಯ ಕಾಪು ಪೊಲೀಸ್ ಠಾಣೆಯ ಸಿಐ ಮಹೇಶ್ ಪ್ರಸಾದ್ ಅವರನ್ನು ನೇಮಿಸಿದೆ. ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ಯಾನ್ಸರ್ ಕಮ್ ನಟ ಕಿಶೋರ್ ಶೆಟ್ಟಿ ಬಂಧನ, ಕಿಶೋರ್ ಆಪ್ತರ ಹೇಳಿಕೆ ಆಧಾರದ ಮೇಲೆ ನಿರೂಪಕಿ ಅನುಶ್ರೀಗೆ ವಿಚಾರಣೆಗೆ ಸಮನ್ಸ್ ನೀಡಲಾಗಿತ್ತು.
ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರು ಹಾಗೂ ಬೆಂಗಳೂರು ನಡುವಿನ ಸಂಪರ್ಕವಾಗಿದ್ದ ನೈಜೀರಿಯನ್ ಫ್ರಾಂಕ್ ಎಂಬಾತನನ್ನು ವಿಚಾರಣೆಗೊಳಪಡಿಸಲಾಗಿದ್ದು, ಅಗತ್ಯ ಬಿದ್ದರೆ ನಟಿ ಅನುಶ್ರೀ ಅವರನ್ನು ಮತ್ತೊಮ್ಮೆ ವಿಚಾರಣೆಗೊಳಪಡಿಸಲಾಗುವುದು ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಈ ಮಧ್ಯೆ, ಡ್ರಗ್ಸ್ ಕೇಸ್ ನಿಂದ ತಮ್ಮನ್ನು ಬಿಡುಗಡೆ ಮಾಡಿಸುವಂತೆ ಅನುಶ್ರೀ ಮಾಜಿ ಸಿಎಂ, ಅವರ ಪುತ್ರ, ಓರ್ವ ಸಂಸದರ ಮೇಲೆ ಪ್ರಭಾವ ಬೀರಿದ್ದಾರೆ ಎನ್ನಲಾಗಿದ್ದು, ಇನ್ಸ್ಪೆಕ್ಟರ್ ವರ್ಗಾವಣೆ ಇದಕ್ಕೆ ಪುಷ್ಟಿ ನೀಡುವಂತಿದೆ. ಇಂದು (ಅ.2) ನಿರೂಪಕಿ ಅನುಶ್ರೀ ಫೇಸ್ ಬುಕ್ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದು, ನನ್ನ ಚಾರಿತ್ರ್ಯವಧೆ ಮಾಡಬೇಡಿ, ನನ್ನನ್ನು ನಂಬಿ ಪ್ಲೀಸ್ ಎಂದು ಕಣ್ಣೀರಿಟ್ಟಿದ್ದಾರೆ. ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅವರು ಅನುಶ್ರೀಗೆ ”ಶುಗರ್ ಡ್ಯಾಡಿ” ರಕ್ಷಣೆ ಸಿಕ್ಕಿದೆ ಎಂದು ದೂರಿದ್ದಾರೆ. ಆದರೆ ಶುಗರ್ ಡ್ಯಾಡಿ ಯಾರು ಎಂಬುದನ್ನು ಅವರು ನೇರವಾಗಿ ಹೇಳಿಲ್ಲ.

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!