ಹುಬ್ಬಳ್ಳಿ: ಪಿಎಲ್ಡಿ, ಡಿಸಿಸಿ ಬ್ಯಾಂಕ್ ಹಾಗೂ ಸಹಕಾರಿ ಸಂಘಗಳಲ್ಲಿನ ರೈತರ ಸಾಲದ ಹಾಗೂ ಸುಸ್ತಿ ಮೇಲಿನ ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡಲಾಗುವುದೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ದಿನಗಳಿಂದ ನಾಡಿನ ರೈತರು ಸಾಲದಲ್ಲಿ ಸಿಲುಕಿದ್ದು, ಈ ಸಂಬಂಧ ಬಡ್ಡಿ ಹಾಗೂ ಸುಸ್ತಿ ಬಡ್ಡಿ ಮನ್ನಾ ಮಾಡಲಾಗುತ್ತಿದೆ. ಇದರಿಂದ ಸರ್ಕಾರಕ್ಕೆ 400 ಕೋಟಿ ರೂ. ವೆಚ್ಚವಾಗಲಿದೆ ಎಂದು ತಿಳಿಸಿದರು.
ಮಾರ್ಚ್ ಅಂತ್ಯದ ಒಳಗಾಗಿ ಸಾಲ ಮರುಪಾವತಿಸುವ ರೈತರಿಗೆ ರಿಯಾಯಿತಿಯನ್ನು ಸಹ ನೀಡಲು ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದರು.
ರೈತರ ಸಾಲದ ಮೇಲಿನ ಬಡ್ಡಿ ಮನ್ನಾ- ಬಿಎಸ್ ವೈ
Follow Us