Wednesday, October 5, 2022

ಐಪಿಎಲ್ ಬೆಟ್ಟಿಂಗ್; ಶಾಸಕರ ಪತ್ನಿಯ ಕಾರು ಜಪ್ತಿ!

Follow Us

newsics.com
ಕಲಬುರ್ಗಿ: ನಗರದ ಎಂ.ಬಿ. ನಗರದ ಮನೆಯೊಂದರಲ್ಲಿ ಮೂರು ದಿನಗಳ ಹಿಂದೆ ಐಪಿಎಲ್ ಕ್ರಿಕೆಟ್ ಟೂರ್ನಿಯ ಬೆಟ್ಟಿಂಗ್ ನಡೆಯುತ್ತಿದ್ದ ವೇಳೆ ಇಬ್ಬರನ್ನು ವಶಕ್ಕೆ ಪಡೆದಿರುವ ಸೊಲ್ಲಾಪುರ ಸಿಸಿಬಿ‌ ಪೊಲೀಸರು, ಶಾಸಕರ ಪತ್ನಿಯ ಕಾರನ್ನು ಜಪ್ತಿ ಮಾಡಿದ್ದಾರೆ.
ಕಲಬುರ್ಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ಅವರ ಪತ್ನಿ ಜಯಶ್ರೀ ಮತ್ತಿಮೂಡ ಹೆಸರಿನಲ್ಲಿರುವ ಇನ್ನೋವಾ ಕ್ರಿಸ್ಟಾ ಕಾರನ್ನು ಪೊಲೀಸರು ವಶಕ್ಕೆ ‌ಪಡೆದಿದ್ದಾರೆ. ಕೆಎ 51, ಎಂ.ಪಿ. 9955 ನೋಂದಣಿಯ‌ ಕಾರು ಶಾಸಕರ ಪತ್ನಿಯ ಹೆಸರಿನಲ್ಲಿದೆ.
ಮಹಾರಾಷ್ಟ್ರ ಪೊಲೀಸರು ‌ಕಲಬುರ್ಗಿ ಪೊಲೀಸರ ಗಮನಕ್ಕೂ ಬಾರದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ‌ಸೊಲ್ಲಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬೆಟ್ಟಿಂಗ್‌ನಲ್ಲಿ ಇನ್ನೂ ಹಲವು ಜನರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಅವರಿಗಾಗಿ ಶೋಧ ಮುಂದುವರಿಸಿದ್ದಾರೆ.
ಬೆಟ್ಟಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಅತುಲ್ ಸಿರಶೆಟ್ಟಿ, ಪ್ರದೀಪ್ ಮಲ್ಲಯ್ಯ ಕಾರಂಜೆ ಎಂಬುವರಿಂದ ‌₹ 38.44 ಲಕ್ಷ ನಗದು, ನಾಲ್ಕು ಲ್ಯಾಪ್‌ಟಾಪ್‌ಗಳು, ಟಿ.ವಿ. ವಶಕ್ಕೆ ಪಡೆದಿರುವ ಮಹಾರಾಷ್ಟ್ರದ ಸೊಲ್ಲಾಪುರದ ಸಿಸಿಬಿ ಪೊಲೀಸರು, ಎರಡು ಕಾರು ಹಾಗೂ ಒಂದು ‌ಸ್ಕೂಟರ್ ಜಪ್ತಿ ‌ಮಾಡಿದ್ದಾರೆ.

ಸೋಮವಾರ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ

ಕೃನಾಲ್ ಪಾಂಡ್ಯ ಬಳಿ ಇದ್ದದ್ದು ದುಬಾರಿ ವಾಚ್

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!