Wednesday, November 30, 2022

ರೋಹಿಣಿ ಸಿಂಧೂರಿ ವಿರುದ್ಧ ಆಕ್ರೋಶ: ಈಗ ಐಪಿಎಸ್ ಅಧಿಕಾರಿ ರೂಪಾ ಸರದಿ!

Follow Us

newsics.com

ಮೈಸೂರು‌: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಬಗ್ಗೆ ಇನ್ನೋರ್ವ ಐಎಎಸ್ ಅಧಿಕಾರಿ ಶಿಲ್ಪಾ ನಾಗ್ ಆರೋಪ‌ ಮಾಡಿದ್ದಾಯ್ತು. ಈಗ ಐಪಿಎಸ್ ಅಧಿಕಾರಿ ಡಿ.ರೂಪಾ ಕೂಡ ಈ ಕಿತ್ತಾಟದ ಅಖಾಡಕ್ಕೆ ಇಳಿದಿದ್ದಾರೆ.
ಈ ಮೂಲಕ ಇಬ್ಬರು ಮಹಿಳಾ ಅಧಿಕಾರಿಗಳ‌ ಜಗಳದಲ್ಲಿ ಮತ್ತೋರ್ವ ಅಧಿಕಾರಿಯೂ ಭಾಗಿಯಾದಂತಾಗಿದೆ.
ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ಸರ್ಕಾರಿ ನಿವಾಸದಲ್ಲಿ ನಿರ್ಮಿಸಿದ್ದ ಈಜುಕೊಳದ ಬಗ್ಗೆ ಡಿ.ರೂಪಾ ಪ್ರತಿಕ್ರಿಯಿಸಿದ್ದು, ರೋಹಿಣಿ ಸಿಂಧೂರಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದಾರೆ.
ಎಲ್ಲರೂ ಕೊರೋನಾ ಹಾಗೂ ಆರ್ಥಿಕ ಸಂಕಷ್ಟದಲ್ಲಿರುವಾಗ ಜನರ ಹಣದಲ್ಲಿ ಸ್ವಿಮ್ಮಿಂಗ್ ಪೂಲ್ ಕಟ್ಟಿರುವುದು ರೋಹಿಣಿ ಸಿಂಧೂರಿಯವರ ನೈತಿಕ ಅಧಃಪತನವನ್ನು ತೋರುತ್ತದೆ. ಪಾರಂಪರಿಕ ಕಟ್ಟಡದಲ್ಲಿ ಈಜುಕೊಳ ಕಟ್ಟಲು ಪರವಾನಗಿ ತೆಗೆದುಕೊಂಡಿಲ್ಲ ಎನ್ನುವುದು ನಂತರದ ವಿಚಾರ. ಆದರೆ ಈಜುಕೊಳ ನಿರ್ಮಾಣವನ್ನು ಮುಂದೂಡಲೂಬಹುದಿತ್ತು ಎಂದು ಕಿಡಿಕಾರಿದ್ದಾರೆ.
ಸ್ವಿಮ್ಮಿಂಗ್ ಪೂಲ್ ನಿರ್ಮಾಣ ಸಂಬಂಧ ಪ್ರಾದೇಶಿಕ ಆಯುಕ್ತರು ರಾಜ್ಯ ಸರ್ಕಾರಕ್ಕೆ ನಿನ್ನೆ ತನಿಖಾ ವರದಿ ಸಲ್ಲಿಸಿದ್ದಾರೆ. ಅದರಲ್ಲಿ ರೋಹಿಣಿ ಸಿಂಧೂರಿ ಆಡಳಿತಾತ್ಮಕ ಮಂಜೂರಾತಿಯನ್ನು ಪಡೆದಿಲ್ಲ ಎಂದು ವರದಿ ನೀಡಿದ್ದು, ರೋಹಿಣಿ ಸಿಂಧೂರಿ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!