ಬೆಂಗಳೂರು: ಮುಖ್ಯಮಂತ್ರಿ ಸೇರಿದಂತೆ ಹಲವು ಜನಪ್ರತಿನಿಧಿಗಳ ಶಿಫಾರಸು ಆಧರಿಸಿ ಅಧಿಕಾರಿಗಳ ವರ್ಗಾವಣೆ ಮಾಡುವುದು ಕಾನೂನುಬಾಹಿರ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಕಾರಿ ಇಂಜಿನಿಯರ್ ಒಬ್ಬರ ವರ್ಗಾವಣೆಗೆ ಕೇಂದ್ರ ಸಚಿವರೊಬ್ಬರು ಬರೆದ ಪತ್ರವನ್ನು ಅನುಮೋದಿಸಿದ ಮುಖ್ಯಮಂತ್ರಿಗಳ ಕ್ರಮ ಪ್ರಶ್ನಿಸಿದ್ದ ಅರ್ಜಿ ಸಂಬಂಧ ನ್ಯಾಯಾಲಯ ಈ ಆದೇಶ ನೀಡಿದೆ. ರಾಜಕಾರಣಿಗಳ ಅಣತಿಯಂತೆ ನಡೆದುಕೊಂಡು ಕೆಎಂಸಿ ಕಾಯ್ದೆ-1976ರ ಸೆಕ್ಷನ್ 69ರಡಿ ಅಧಿಕಾರ ಚಲಾಯಿಸಿ ಬಿಬಿಎಂಪಿ ಆಯುಕ್ತರು ಹೊರಡಿಸಿರುವ ವರ್ಗಾವಣೆ ಆದೇಶ ದೂಷಪೂರಿತವಾದ್ದದ್ದು ಎಂದು ನ್ಯಾಯಾಲಯ ಹೇಳಿದೆ