Wednesday, October 5, 2022

ಕೆಪಿಎಸ್ಸಿ ರದ್ದುಗೊಳಿಸುವುದೇ ಉತ್ತಮ- ಹೈಕೋರ್ಟ್

Follow Us

newsics.com
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಕಾರ್ಯವೈಖರಿ ಬಗ್ಗೆ ಬೇಸರ ವ್ಯಕ್ತಪಡಿಸಿರುವ ರಾಜ್ಯ ಹೈಕೋರ್ಟ್, ಕೆಪಿಎಸ್‌ಸಿ ರದ್ದತಿಗೆ ಇದು ಸೂಕ್ತ ಸಮಯ ಎಂದು ಅಭಿಪ್ರಾಯಪಟ್ಟಿದೆ.
ಕೆಪಿಎಸ್‌ಸಿಯನ್ನು ರದ್ದುಪಡಿಸಿ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಮಾದರಿಯಲ್ಲಿ ಹೊಸ ಪದ್ದತಿ ಪರಿಚಯಿಸುವುದು ಉತ್ತಮ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಪಾರದರ್ಶಕತೆ ಕಾಯ್ದುಕೊಳ್ಳದೆ ಹತ್ತಾರು ಅಕ್ರಮಗಳನ್ನು ಎಸಗುತ್ತಿರುವ ಕೆಪಿಎಸ್ಸಿ ಪತ್ರಾಂಕಿತ ಹುದ್ದೆಗಳ ನೇಮಕಾತಿಯಲ್ಲೂ ಜ್ಯೇಷ್ಠತೆ ಕಾಯ್ದುಕೊಂಡಿಲ್ಲ ಎಂದು ಹೈಕೋರ್ಟ್ ಹೇಳಿದೆ. 1998ನೇ ಸಾಲಿನ ಕೆಎಎಸ್ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಮಧ್ಯಂತರ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಹಾಗೂ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಕೆಪಿಎಸ್ಸಿಯಲ್ಲಿ ನಡೆದಿರುವ ಅಕ್ರಮಗಳನ್ನು ಸರಿಪಡಿಸಲು ಸಾಧ್ಯವಿಲ್ಲ. ಮುಂದಾದರೂ ನೇಮಕ ವ್ಯವಸ್ಥೆ ಸರಿಯಾಗಬೇಕಾದರೆ ಕೆಪಿಎಸ್‌ಸಿಯನ್ನು ರದ್ದುಪಡಿಸುವುದೇ ಉತ್ತಮ. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಕ್ಕೆ ಯುಪಿಎಸ್‌ಸಿ ಮಾದರಿ ವ್ಯವಸ್ಥೆ ಅನುಷ್ಠಾನಗೊಳಿಸುವುದು ಉತ್ತಮ ಮಾರ್ಗ ಎಂದು ಹೈಕೋರ್ಟ್ ಹೇಳಿದೆ.

ಬಂಗಾಳಿ ನಟ ಸೌಮಿತ್ರಾ ಚಟರ್ಜಿ ಸ್ಥಿತಿ ಚಿಂತಾಜನಕ

ಸಿಡ್ನಿಯಲ್ಲಿ ತರಬೇತಿ ವಿಮಾನ ಪತನ, ಟೀಮ್ ಇಂಡಿಯಾ ಪಾರು

ಸಿಎಂ ರಾಜಕೀಯ ಸಲಹೆಗಾರ ಹುದ್ದೆಯಿಂದ ಎಂ.ಬಿ. ಮರಂಕಲ್’ಗೆ ಕೊಕ್

ಹೊಸ ಬಟ್ಟೆಗಾಗಿ ಜೈಲಿನಲ್ಲಿ ರಾಗಿಣಿ- ಸಂಜನಾ ಕಣ್ಣೀರು…

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!