ಪರಪ್ಪನ ಅಗ್ರಹಾರದಲ್ಲಿ ಇನ್ನು ಮುಂದೆ ಐಟಿಐ ಶಿಕ್ಷಣ

newsics.com ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಅಪರಾಧ ಕೃತ್ಯಗಳಲ್ಲಿ ಜೈಲು ಸೇರಿದವರಿಗಾಗಿ ಕೆಲವೇ ದಿನಗಳಲ್ಲಿ ವೃತ್ತಿಪರ ಐಟಿಐ ಶಿಕ್ಷಣ ಪ್ರಾರಂಭವಾಗಲಿದೆ. ಐಟಿಐ ಕಾಲೇಜು ಸ್ಥಾಪನೆಯ ಪ್ರಸ್ತಾವನೆಯನ್ನು ರಾಜ್ಯ ಕಾರಾಗೃಹ ಇಲಾಖೆ ಸರ್ಕಾರಕ್ಕೆ ಒಪ್ಪಿಸಿದೆ. ಸರ್ಕಾರದಿಂದಲೂ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಕಾಲೇಜು ಆರಂಭವಾದ ಬಳಿಕ ರಾಜ್ಯದಲ್ಲೇ ಮೊದಲ ಬಾರಿಗೆ ಜೈಲಿನಲ್ಲಿ ಕಾಲೇಜು ಸ್ಥಾಪಿಸಿದ ಹೆಗ್ಗಳಿಕೆಗೆ ಸರ್ಕಾರ ಪಾತ್ರವಾಗಲಿದೆ ಗೌರವಯುತ ಜೀವನ ಕಟ್ಟಿಕೊಳ್ಳುವುದಕ್ಕಾಗಿ ಈ ರೀತಿ ಜೈಲಿನಲ್ಲಿಯೇ ಶಿಕ್ಷಣ ನೀಡಲು ನಿರ್ಧರಿಸಿದೆ. ದೇಶದಲ್ಲಿ ಚಿನ್ನ, ಬೆಳ್ಳಿ ಬೆಲೆಯಲ್ಲಿ ಏರಿಕೆ