ಬೆಂಗಳೂರು: ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಉಗ್ರ ಹೋರಾಟಕ್ಕೆ ಹಿಂದೂ ಜಾಗರಣಾ ವೇದಿಕೆ ನಿರ್ಧರಿಸಿದೆ. ಇದರ ಮೊದಲ ಹಂತವಾಗಿ ಇಂದು ಕನಕಪುರ ಚಲೋ ಹೋರಾಟ ಹಮ್ಮಿಕೊಂಡಿದೆ. ಕನಕಪುರದ ಅಯ್ಯಪ್ಪ ಸ್ವಾಮಿ ದೇವಸ್ಥಾನ ಪರಿಸರದಿಂದ ಹೊರಡಲಿರುವ ಮೆರವಣಿಗೆಯಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹಿಂದೂ ಜಾಗರಣಾ ವೇದಿಕೆಯ ಕನಕಪುರ ಚಲೋ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ.