Friday, January 21, 2022

ಮಾಜಿ ಸಚಿವ ವಿನಯ ಕುಲಕರ್ಣಿಗೆ ನ್ಯಾಯಾಂಗ ಬಂಧನ

Follow Us

newsics.com
ಧಾರವಾಡ: ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ನಾಳೆ(ನ.6) ಸಂಜೆಯವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.
ವಿನಯ್ ಕುಲಕರ್ಣಿ ಅವರನ್ನು ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಆರೋಗ್ಯ ತಪಾಸಣೆಯ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇಂದು(ನ.5) ಬೆಳಗ್ಗೆ ಸಿಬಿಐ ಅಧಿಕಾರಿಗಳು ವಿನಯ ಕುಲಕರ್ಣಿ ಅವರನ್ನು ಬಂಧಿಸಿದ್ದರು.
ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಅವರನ್ನು ವಿಚಾರಣೆಗಾಗಿ ಉಪನಗರ ಠಾಣೆಗೆ ಕರೆಸಿಕೊಂಡಿದ್ದ ಸಿಬಿಐ ಅಧಿಕಾರಿಗಳು, ಸುದೀರ್ಘ ವಿಚಾರಣೆಯ ಬಳಿಕ ಬಂಧಿಸಿದ್ದರು.
ವಿನಯ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿರುವುದನ್ನು ಅವರ ಬೆಂಬಲಿಗರು ತೀವ್ರವಾಗಿ ವಿರೋಧಿಸಿದ್ದು, ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದ್ದರು.

ಅಶ್ಲೀಲ ಚಿತ್ರೀಕರಣ: ನಟಿ ಪೂನಂ ಪಾಂಡೆ ಬಂಧನ, ಇಬ್ಬರು ಪೊಲೀಸ್ ಅಧಿಕಾರಿಗಳು ಅಮಾನತು

ಪ್ಲಾಸ್ಮಾ ಥೆರಪಿಯಿಂದ ಸೋಂಕಿತರ ಸಾವಿನ ಸಂಖ್ಯೆ ತಡೆಗಟ್ಟಬಹುದು- ತಜ್ಞರ ಅಭಿಪ್ರಾಯ

ವಾಟ್ಸ್ಯಾಪ್ ಹೊಸ ಫೀಚರ್: ಏಳು ದಿನದಲ್ಲಿ ಮೆಸೇಜ್ ಮಾಯ

ಆರ್’ಸಿಬಿ ತಂಡದೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಕೊಹ್ಲಿ

ಮತ್ತಷ್ಟು ಸುದ್ದಿಗಳು

Latest News

ಹಂತಕರ ಕಣ್ಣಿಗೆ ಖಾರದಪುಡಿ ಎರಚಿ ಪತಿಯ ಪ್ರಾಣ ಉಳಿಸಿದ‌ ಪತ್ನಿ!

newsics.com ಹೈದರಾಬಾದ್‌ : ಪತಿಯ ಹತ್ಯೆಗೆ ಬಂದಿದ್ದ ನಾಲ್ವರ ಕಣ್ಣಿಗೆ ಪತ್ನಿ ಖಾರದ ಪುಡಿ ಎರಚಿ ಪತಿಯ ಪ್ರಾಣ ಉಳಿಸಿದ ಘಟನೆ ತೆಲಂಗಾಣದ ವಾರಂಗಲ್‌ನ ಶಂಭುನಿಪೇಟೆಯಲ್ಲಿ...

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯುವಕನ ಮೆದುಳು ನಿಷ್ಕ್ರಿಯವಾಗಿದ್ದ ಕಾರಣ ಅವರ...

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...
- Advertisement -
error: Content is protected !!