Tuesday, April 13, 2021

ರಾಜ್ಯದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ಆರಂಭ

ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾದ ಕೆ  ಎಸ್ ಆರ್ ಟಿ ಸಿ ಬಸ್ ಸಂಚಾರ ಪುನರಾರಂಭವಾಗಿದೆ. ಆದರೆ 12 ಗಂಟೆಗೂ ಹೆಚ್ಚು ಪ್ರಯಾಣ ಮಾಡಬೇಕಾದ ಸ್ಥಳಗಳಿಗೆ ಬೆಂಗಳೂರಿನಿಂದ ಬಸ್ ಸಂಚಾರ ಆರಂಭವಾಗಿಲ್ಲ. ಇದರಿಂದಾಗಿ ರಾಯಚೂರು, ಕೊಪ್ಪಳ,  ವಿಜಯಪುರ , ಗದಗ ಮತ್ತು ಬೀದರ್ ಸೇರಿದಂತೆ ಹಲವು ಪ್ರದೇಶಗಳಿಗೆ ಬಸ್ ಸಂಚಾರ ಆರಂಭವಾಗಿಲ್ಲ. ಇದರಿಂದಾಗಿ ಉತ್ತರ ಕರ್ನಾಟಕದ ಜನರು ಸಂಕಷ್ಟಕ್ಕೆ ಈಡಾಗಿದ್ದಾರೆ. ಬೆಂಗಳೂರಿನಿಂದ ಮಂಗಳೂರಿಗೆ ಬೆಳಿಗ್ಗೆ 11.30ಕ್ಕೆ ಕೊನೆಯ ಬಸ್ ಹೊರಡಲಿದೆ.  ಶಿವಮೊಗ್ಗಕ್ಕೆ 12 ಗಂಟೆ ಮತ್ತು ಹಾಸನಕ್ಕೆ ಮಧ್ಯಾಹ್ನ 3. 30ಕ್ಕೆ ಕೊನೆಯ ಬಸ್ ಪ್ರಯಾಣ ಬೆಳಸಲಿದೆ. ಬೆಂಗಳೂರಿನ  ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಸಾವಿರಾರು ಮಂದಿ ಪ್ರಯಾಣಿಕರು ತಮ್ಮ ಊರುಗಳಿಗೆ ಮರಳಲು ಬಸ್ ಗಳಿಗಾಗಿ ಕಾಯುತ್ತಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!