ಕಲಬುರಗಿ: ಸೇಡಂ ತಾಲೂಕಿನ ಶಿಲಾರಕೋಟ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಬಿಸಿಯೂಟ ಸೇವಿಸಿದ 30 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಿಸಿಯೂಟ ಸೇವಿಸಿದ ಮಕ್ಕಳಲ್ಲಿ ಸಂಜೆ 4 ಗಂಟೆ ಸುಮಾರಿಗೆ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದ್ದು, ಪೋಷಕರು ಮತ್ತು ಶಿಕ್ಷಕರು ಮುಧೋಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಕ್ಕಳನ್ನು ದಾಖಲಿಸಿ ಚಿಕಿತ್ಸೆ ಕೊಡಿಸಿದರು. ಇಬ್ಬರು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.
ಬಿಸಿಯೂಟ ಸೇವಿಸಿದ 30 ವಿದ್ಯಾರ್ಥಿಗಳು ಅಸ್ವಸ್ಥ
Follow Us