Saturday, November 26, 2022

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ: ಯಾವುದೇ ಬದಲಾವಣೆಯಿಲ್ಲ- ಸಚಿವ ಅಶ್ವತ್ಥನಾರಾಯಣ್

Follow Us

newsics.com

ಬೆಂಗಳೂರು: ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆಯನ್ನು ಮೊಟಕುಗೊಳಿಸುವ ಯಾವುದೇ ಚಿಂತನೆ ಅಥವಾ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.

ಸ್ಥಳೀಯ ಹಾಗೂ ಪ್ರಾದೇಶಿಕ ಭಾಷೆಗಳಿಗೆ ಹೆಚ್ಚು ಮನ್ನಣೆ ನೀಡಿ ಆ ಭಾಷೆಗಳಲ್ಲೇ ವೃತ್ತಿಪರ ಶಿಕ್ಷಣ ಸೇರಿ ಎಲ್ಲ ವಿಭಾಗದ ಉನ್ನತ ಶಿಕ್ಷಣವನ್ನು ಬೋಧಿಸಬೇಕು ಎಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯ. ಈ ಅಂಶಕ್ಕೆ ಶಿಕ್ಷಣ ನೀತಿಯಲ್ಲಿ ಹೆಚ್ಚು ಒತ್ತು ನೀಡಲಾಗಿದೆ ಎಂದು ಗುರುವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪದವಿ ಶಿಕ್ಷಣದಲ್ಲಿ ಎರಡು ವರ್ಷ ಕನ್ನಡ ಬೋಧನೆ ಆಗುತ್ತಿರುವ ಹಾಲಿ ವ್ಯವಸ್ಥೆಯಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ. ಮಾತೃಭಾಷೆ ಕಲಿಕೆಯನ್ನು ಒಂದು ವರ್ಷಕ್ಕೆ ಸೀಮಿತಗೊಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿಲ್ಲ ಎಂದು ಡಾ.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!