newsics.com
ಕೋಲಾರ: ನರಸಾಪುರದ ಕರ್ನಾಟಕ ಪಬ್ಲಿಕ್ ಶಾಲೆಯ ಕನ್ನಡ ಶಿಕ್ಷಕ ಪ್ರಕಾಶ್, ವಿದ್ಯಾರ್ಥಿನಿಯರ ಮೈ ಮುಟ್ಟಿ ಮಾತನಾಡುವುದು, ಅಶ್ಲೀಲವಾಗಿ ವರ್ತನೆ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.
10ನೇ ತರಗತಿ ವಿದ್ಯಾರ್ಥಿನಿಗೆ ಹನಿಮೂನ್ ಹೇಗಿರುತ್ತೆ ಎಂದು ಪ್ರಶ್ನೆ ಕೇಳಿದ್ದಾನೆ ಎಂದು ಆರೋಪಿಸಲಾಗಿದ್ದು, ಕೂಡಲೇ ಶಿಕ್ಷಕನನ್ನು ಅಮಾನತು ಮಾಡಬೇಕೆಂದು ವಿದ್ಯಾರ್ಥಿಗಳ ಪೋಷಕರು ಆಗ್ರಹಿಸಿದ್ದಾರೆ.
ಕನ್ನಡ ಶಿಕ್ಷಕ ಪ್ರಕಾಶ್ ವಿರುದ್ದ ವಿದ್ಯಾರ್ಥಿನಿ ಪೋಷಕರು ದೂರು ನೀಡಿದ್ದರಿಂದ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಕಣ್ಣಯ್ಯ ಆಗಮಿಸಿ ವಿಚಾರಣೆ ನಡೆಸುತ್ತಿದ್ದಾರೆ. ಶಿಕ್ಷಕ ಪ್ರಕಾಶ್ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.