ಬೆಂಗಳೂರು: ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಗುರುವಾರ ಕರ್ನಾಟಕ ಬಂದ್‌ಗೆ ಕರೆನೀಡಿವೆ.
ಬಂದ್ ಕರೆ ಹಿನ್ನೆಲೆಯಲ್ಲಿ ಓಲಾ, ಉಬರ್, ಆಟೋ ಸಂಚಾರ ಇರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್, ಬಿಎಂಟಿಸಿ, ನಮ್ಮ ಮೆಟ್ರೋ ಸಂಚಾರ ಎಂದಿನಂತಿರಲಿದೆ. ಶಾಲೆ- ಕಾಲೇಜು, ಸಿನೆಮಾ ಮಂದಿರಗಳು ತೆರೆದಿರಲಿವೆ. ಆದರೆ ಬಂದ್ ವೇಳೆಯ ಪರಿಸ್ಥಿತಿ ಆಧರಿಸಿ ಇವುಗಳ ಕಾರ್ಯನಿರ್ವಹಣೆ ನಿರ್ಧಾರವಾಗಲಿದೆ. ಹಲವು ಕನ್ನಡ ಸಂಘಟನೆಗಳು, ಆಟೋ, ಓಲಾ, ಊಬರ್ ಚಾಲಕರ ಸಂಘಟನೆಗಳು, ಕೆಲ ಕಾರ್ಮಿಕ ಸಂಘಟನೆಗಳು ಈ ಬಂದ್‌ಗೆ ಬೆಂಬಲ ನೀಡಿವೆ. ಆದರೆ, ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣನ ಗೌಡ ಹಾಗೂ ಪ್ರವೀಣ್ ಶೆಟ್ಟಿ ಬಣ, ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ನಮ್ಮ ಮೆಟ್ರೋ, ಹೋಟೆಲ್ ಸಂಘಟನೆಗಳು, ಔಷಧ ಅಂಗಡಿಗಳ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿಲ್ಲ.
ಹುಬ್ಬಳ್ಳಿ, ಬೆಳಗಾವಿ, ಮಂಗಳೂರುಗಳಲ್ಲಿ ಬಂದ್‌ಗೆ ಬೆಂಬಲ ನೀಡುವುದಿಲ್ಲ ಎಂದು ಹಲವು ಸಂಘಟನೆಗಳು ಹೇಳಿವೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸೇರಿ ಹಲವು ಸಂಘಟನೆಗಳು ನೈತಿಕ ಬೆಂಬಲವನ್ನಷ್ಟೆ ಘೋಷಿಸಿವೆ.
ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಇಂದು ಕರ್ನಾಟಕ ಬಂದ್
Follow Us