newsics.com
ಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರ ಎಥೆನಾಲ್ ಮೇಲಿನ ಲಾಭಾಂಶ ನೀಡಲು ನಿರ್ಧರಿಸಿದೆ.
ಇಂದು ವಿಕಾಸಸೌಧದಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ನೇತೃತ್ವದಲ್ಲಿ ನಡೆದ ಕಬ್ಬು ನಿಯಂತ್ರಣ ಮಂಡಳಿಯ ಸಭೆಯಲ್ಲಿ ಎಫ್ಆರ್ಪಿ ದರ ಪಾವತಿ ಬಳಿಕ ಪ್ರತಿ ಟನ್ಗೆ ಹೆಚ್ಚುವರಿಯಾಗಿ 50 ರೂ ನಂತೆ ಒಟ್ಟು 204.47 ಕೋಟಿ ಬಿಡುಗಡೆ ಮಾಡಿದೆ. ಜೊತೆಗೆ ರಾಜ್ಯ ಸರ್ಕಾರದ ತೀರ್ಮಾನವನ್ನು ಇಂದೇ ಹೊರಡಿಸುಂತೆ ಕಬ್ಬು ಅಭಿವೃದ್ಧಿ ಆಯುಕ್ತರಿಗೆ ಸಚಿವರು ಸೂಚಿಸಿದ್ದಾರೆ.
ಕಬ್ಬಿಗೆ ಬೆಂಬಲ ಬೆಲೆ, ಉಪ ಉತ್ಪನ್ನಗಳ ಲಾಭಾಂಶ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಫ್ರೀಡಂ ಪಾರ್ಕ್ನಲ್ಲಿ ಹೋರಾಟ ಮಾಡುತ್ತಿದ್ದ ರೈತರಿಗೆ ಈ ಮೂಲಕ ಸಹಿಸುದ್ದಿ ಸಿಕ್ಕಂತಾಗಿದೆ.