Friday, January 27, 2023

PSI ಹಗರಣ- ಸಿಐಡಿ ತನಿಖಾಧಿಕಾರಿಗೆ ₹ 76 ಲಕ್ಷ ಲಂಚ ಕೊಟ್ಟಿದ್ದೇನೆಂದ RD ಪಾಟೀಲ!

Follow Us

newsics.com

ಕಲಬುರಗಿ: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಿಂದ ಪಾರಾಗಲು  ಸಿಐಡಿ ತನಿಖಾಧಿಕಾರಿಗೆ ₹ 76 ಲಕ್ಷ ಲಂಚ ಕೊಟ್ಟಿದ್ದೇನೆಂದ RD ಪಾಟೀಲ ಹೇಳಿದ್ದಾರೆ.

ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರಿಗೆ ₹ 76 ಲಕ್ಷ ನೀಡಿರುವುದಾಗಿ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ಕರ್ನಾಟಕ ಲೋಕಾಯುಕ್ತರಿಗೆ ದೂರು ನೀಡಿದ್ದಾನೆ.

ದೂರಿನೊಂದಿಗೆ 8.4 ನಿಮಿಷ ಅವಧಿಯ ಆಡಿಯೊದ ಪೆನ್ ಡ್ರೈವ್ ದಾಖಲೆಯಾಗಿ ನೀಡಿದ್ದು, ಈ ಸಂಬಂದ ‘ಆರ್.ಡಿ. ಪಾಟೀಲ ಯುವ ಬ್ರಿಗೇಡ್’ ಹೆಸರಿನ ಫೇಸ್‌ಬುಕ್‌ ಮೇಲೆ ಪೇಜ್ ಮೂಲಕ ಪಾಟೀಲ ಮಾತನಾಡಿರುವ ಆಡಿಯೊ ಸೋಮವಾರ ರಾತ್ರಿ ಅಪ್ ಲೋಡ್ ಆಗಿದೆ.

ಆಡಿಯೊದಲ್ಲಿ ಏನಿದೆ?: ಶಂಕರಗೌಡ ಪಾಟೀಲ ಅವರು ಪ್ರಕರಣ ಮುಂದುವರೆಸದಿರಲು ನನಗೆ ₹ 3 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ನನ್ನಿಂದ ಅಷ್ಟು ಹಣ ಹೊಂದಿಸಲು ಸಾಧ್ಯವಾಗುವುದಿಲ್ಲ. ಬೇಕಿದ್ದರೆ ₹ 76 ಲಕ್ಷ ಹಣವನ್ನು ಕೊಡುತ್ತೇನೆ ಎಂದು ಹೇಳಿ ಬ್ಯಾಂಕ್ ಆಫ್ ಬರೋಡ ಶಾಖೆಯಿಂದ ಹಣ ಡ್ರಾ ಮಾಡಿಸಿಕೊಂಡು ನನ್ನ ಅಳಿಯ ಶ್ರೀಕಾಂತನ ಮೂಲಕ ಅವರಿಗೆ ತಲುಪಿಸಿದ್ದೆ. ನಾನು ಜಾಮೀನು ಪಡೆದು ಹೊರ ಬಂದ ಬಳಿಕವೂ ಶಂಕರಗೌಡ ಹಾಗೂ ಅವರ ಅಧೀನ ಸಿಬ್ಬಂದಿ‌ಯು ಮನೆಗೆ ಬಂದು ಉಳಿದ ಹಣ ನೀಡಿವಂತೆ ಕಿರುಕುಳ ನೀಡಿದ್ದಾರೆ’ ಎಂದು ಫೇಸ್‌ಬುಕ್‌ ಆಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಆರೋಪಗಳನ್ನು ಶಂಕರಗೌಡ ಪಾಟೀಲ ಅವರು ಅಲ್ಲಗಳೆದಿದ್ದಾರೆ‌.

ಇನ್ಮುಂದೆ ಬರಲಿದೆ ಕುಡಿಯಬಹುದಾದ ಕೋವಿಡ್​ 19 ಲಸಿಕೆ!

ಮತ್ತಷ್ಟು ಸುದ್ದಿಗಳು

vertical

Latest News

55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ

newsics.com ದೆಹಲಿ: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ ವಿಧಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ...

ನಟಿ ಅದಿತಿಯ ಮಾಜಿ ಪತಿ‌ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಡಿಸೈನರ್

newsics.com ಮುಂಬೈ: ಬಾಲಿವುಡ್ ಹಿರಿಯ ನಟಿ ನೀನಾ ಗುಪ್ತಾ, ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಪುತ್ರಿ ಮಸಾಬಾ ಗುಪ್ತಾ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ನಟ ಸತ್ಯದೀಪ್ ಮಿಶ್ರಾ ಜೊತೆ ಮಸಾಬಾ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈ ಕುರಿತು ನವಜೋಡಿ...

ಖಗೋಳದ ಅಪರೂಪದ ಅತಿಥಿ ಧೂಮಕೇತು ವಿದಾಯಕ್ಕೆ ಸಿದ್ಧ!

newsics.com ನವದೆಹಲಿ: ಖಗೋಳದ ಅಪರೂಪದ ಅತಿಥಿಯೊಂದು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಖಗೋಳದ ಅಪರೂಪದ ಅತಿಥಿ ಹಸಿರು ಬಣ್ಣದ ಸಿ/2022 ಇ3 ದೀರ್ಘಾವಧಿಯ ಧೂಮಕೇತು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಮತ್ತೆ ಇದರ ಭೇಟಿ ಬರೋಬ್ಬರಿ 50,000...
- Advertisement -
error: Content is protected !!