Tuesday, April 13, 2021

ಪ್ರಧಾನಿ ಅನುಮತಿ ಬಳಿಕ ರಾಜ್ಯದಲ್ಲಿ ಪ್ರಾರ್ಥನಾ ಮಂದಿರ ತೆರೆಯಲಿದೆ ಎಂದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಎಲ್ಲ ಧರ್ಮಗಳ ಜನರ ಪ್ರಾರ್ಥನಾ ಮಂದಿರಗಳು ತೆರೆಯುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರವೇ ಅಂತಿಮ. ಅವರು ಅನುಮತಿ ನೀಡಿದ ಬಳಿಕಷ್ಟೇ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಸರ್ಕಾರಕ್ಕೆ ಎಲ್ಲ ಜನರ ಪ್ರಾರ್ಥನಾ ಮಂದಿರಗಳು ಒಂದೇ. ಇದರಲ್ಲಿ ಭೇದ ಭಾವ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ದೇವಸ್ಥಾನ ತೆರೆದರೆ ಆ ಸಂದರ್ಭದಲ್ಲಿ ಮಸೀದಿ ಮತ್ತು ಚರ್ಚೆ ಗಳಲ್ಲಿ ಪ್ರಾರ್ಥನೆಗೆ  ಅವಕಾಶ ದೊರೆಯಲಿದೆ ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸಿಎಂ ಹೇಳಿದ್ದಾರೆ. ಜೂನ್ ಒಂದರಿಂದ  ರಾಜ್ಯದಲ್ಲಿ ದೇವಸ್ಥಾನದಲ್ಲಿ ಭಕ್ತರಿಗೆ ಪೂಜೆ ಗೆ ಅವಕಾಶ ಕಲ್ಪಿಸಲಾಗುವುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಸಿಎಂ ಈ ಸ್ಪಷ್ಟೀಕರಣ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!