newsics.com
ಕೇರಳ: ಕಾಸರಕೋಡು ಕಡಲತೀರದಲ್ಲಿ ಅಪರೂಪದ ‘ಗಿಟಾರ್ ಫಿಶ್’ ಪತ್ತೆಯಾಗಿದೆ.
ಕಡಲತೀರದಲ್ಲಿ ಮೀನು ಬಿದ್ದಿರುವುದು ಕಂಡು ಬಂದಿದ್ದು. ಈ ಹಿಂದೆ ಇಂತಹ ಮೀನನನ್ನು ಎಲ್ಲಿಯೂ ನೋಡಿರಲಿಲ್ಲ ಎಂದು ಕಾಸರಕೋಡಿನ ಇಕೋ ಬೀಚ್‌ನ ವ್ಯವಸ್ಥಾಪಕ ವಿನೋದ್ ಎಸ್ ಸಿದ್ಲಾನಿ ಹೇಳಿದ್ದಾರೆ.
ಇದು ಚಿಕ್ಕ ಶಾರ್ಕ್‌ಗಳಲ್ಲಿ ಒಂದಾಗಿದೆ ಮತ್ತು ಅಪರೂಪವಾಗಿ ಕಂಡುಬರುತ್ತದೆ ಎಂದು ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಸಾಗರ ಜೀವಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಶಿವಕುಮಾರ ಹರಗಿ ಹೇಳಿದ್ದಾರೆ.
ನೀರಿನ ಆಳದಲ್ಲಿ ವಾಸಿಸುವ ಮೀನು ಇದಾಗಿದೆ ಎಂದು ಸಮುದ್ರ ಜೀವಶಾಸ್ತ್ರ ವಿಭಾಗದ ಸಂಶೋಧಕ ಸೂರಜ್ ಪೂಜಾರ್ ಹೇಳಿದ್ದಾರೆ. ನಾಚಿಕೆ ಸ್ವಭಾವವುಳ್ಳ ಮೀನು ಇದಾಗಿದ್ದು, ಸಾಮಾನ್ಯವಾಗಿ ಯಾರ ಕಣ್ಣಿಗೂ ಬೀಳುವುದಿಲ್ಲ ಎಂದು ತಿಳಿಸಿದ್ದಾರೆ.