Tuesday, January 31, 2023

ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಜೀವನದಿ‌ ಕಾವೇರಿ

Follow Us

newsics.com

ಮಡಿಕೇರಿ: ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಮಧ್ಯಾಹ್ನ 1:11ರ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ್ದಾಳೆ.

ಕರುನಾಡಿನ ಜೀವನದಿ ಕಾವೇರಿ ತೀರ್ಥರೂಪಿಣಿಯಾಗಿ ಉದ್ಭವಿಸಿದ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರದಲ್ಲಿ ಸಂಭ್ರಮ ಮನೆ ಮಾಡಿದೆ. ಭಕ್ತರು ಪವಿತ್ರ ಜೀವನದಿಯ ತೀರ್ಥೋದ್ಭವವನ್ನು ಕಣ್ತುಂಬಿಕೊಂಡರು.

ಸೂರ್ಯ ಕನ್ಯಾರಾಶಿಯಿಂದ ತುಲಾ ರಾಶಿಗೆ ಪ್ರವೇಶ ಮಾಡಲಿದ್ದು, ಆ ವೇಳೆ ಕಾವೇರಿ ತೀರ್ಥೋದ್ಭವವಾಗಲಿದೆ ಎಂಬುದು ನಂಬಿಕೆ. ತೀರ್ಥೋದ್ಭವ ವೇಳೆ 6 ಅರ್ಚಕರಿಂದ ವಿಶೇಷ ಪೂಜೆ, ಧಾರ್ಮಿಕ ಕೈಂಕರ್ಯಗಳು ನಡೆದವು.

ಕೋವಿಡ್ ಹಿನ್ನೆಲೆಯಲ್ಲಿ ತೀರ್ಥೋದ್ಭವ ವೇಳೆ ಕಲ್ಯಾಣಿಗೆ ಇಳಿದು ಪುಣ್ಯ ಸ್ನಾನ ಮಾಡುವಂತಿಲ್ಲ. ಭಕ್ತರಿಗೆ ತೀರ್ಥ ವಿತರಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಇಂದಿನಿಂದ ಒಂದು ತಿಂಗಳ ಕಾಲ ತಲಕಾವೇರಿಯಲ್ಲಿ ಜಾತ್ರೋತ್ಸವ ನಡೆಯಲಿದ್ದು, ತಲಕಾವೇರಿ, ಭಾಗಮಂಡಲದಲ್ಲಿ ಭದ್ರತೆಗೆ ಕೆಎಸ್‌ಆರ್‌ಪಿ, ಡಿಆರ್ ಪೊಲೀಸರನ್ನು ನಿಯೋಜಿಸಲಾಗಿದೆ.

ಡೀಸೆಲ್ ದರ ಹೆಚ್ಚಳ: ಸದ್ಯದಲ್ಲೇ ಅನಿರ್ದಿಷ್ಟಾವಧಿ ಲಾರಿ‌ ಮುಷ್ಕರ

ಅಡುಗೆಗೆ ಎಂತಹ ಪಾತ್ರೆಗಳು ಬೇಕು?

37ನೇ ವಯಸ್ಸಿನಲ್ಲಿ ಅಂಡಾಣು ಸಂರಕ್ಷಿಸಿ 40ರಲ್ಲಿ ತಾಯಿಯಾದ ನಿಧಿ ಪರ್ಮಾರ್

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ

ಮತ್ತಷ್ಟು ಸುದ್ದಿಗಳು

vertical

Latest News

ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

newsics.com ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. 26 ವಿಷಯಗಳ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು...

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಎಫ್‌ಐಸಿಸಿಐ ಆಯೋಜಿಸಿದ್ದ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...
- Advertisement -
error: Content is protected !!