ಬೆಂಗಳೂರು: ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನೇಮಕಾತಿ ಸಂಬಂಧ ಕಾಂಗ್ರೆಸ್ ವರಿಷ್ಠ ಮಂಡಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಾಲೋಚನೆಗಾಗಿ ದೆಹಲಿಗೆ ಬರುವಂತೆ ಸೂಚಿಸಿದೆ. ಸಿದ್ದರಾಮಯ್ಯ ಅವರ ಅಭಿಪ್ರಾಯ ಪರಿಗಣಿಸಿ, ಕಾಂಗ್ರೆಸ್ ವರಿಷ್ಟ ಮಂಡಳಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ. ಕಾಂಗ್ರೆಸ್ ಹಿರಿಯ ನಾಯಕ ಡಿ ಕೆ ಶಿವಕುಮಾರ್ ಮತ್ತು ಮಾಜಿ ಸಚಿವ ಎಂ ಬಿ ಪಾಟೀಲ್ ಮಧ್ಯೆ ಕೆಪಿಸಿಸಿ ಪಟ್ಟಕ್ಕೆ ಪೈಪೋಟಿಯಿದೆ. ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಿದರೂ ಮಂಗಳವಾರ ಸೋನಿಯಾ ಗಾಂಧಿ ಜೊತೆ ಮಾತುಕತೆ ನಡೆಸಲಿದ್ದಾರೆ.