ನವದೆಹಲಿ: ಕೆಪಿಸಿಸಿ ನೂತನ ಸಾರಥಿ ಆಯ್ಕೆ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಲಿದ್ದಾರೆ. ಈಗಾಗಲೇ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಜೊತೆ ಸಮಾಲೋಚನೆ ನಡೆಸಿರುವ ಸಿದ್ದರಾಮಯ್ಯ, ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ತಮ್ಮ ಮುಕ್ತ ಅಭಿಪ್ರಾಯ ತಿಳಿಸಿದ್ದಾರೆ. ಲಿಂಗಾಯತ ಸಮುದಾಯದ ನಾಯಕನ ಆಯ್ಕೆ ಮಾಡಿದರೆ ಪಕ್ಷಕ್ಕೆ ಉತ್ತಮ ಎಂಬ ನಿಲುವನ್ನು ಸಿದ್ದರಾಮಯ್ಯ ಹೊಂದಿದ್ದಾರೆ ಎಂದು ಹೇಳಲಾಗಿದೆ. ಇದನ್ನು ಕಾಂಗ್ರೆಸ್ ವರಿಷ್ಟ ಮಂಡಳಿ ಅನುಮೋದಿಸಿದರೆ ಅಧ್ಯಕ್ಷ ಪದವಿ ಎಂ. ಬಿ. ಪಾಟೀಲ್ ಪಾಲಾಗುವ ಸಾಧ್ಯತೆ ಹೆಚ್ಚಾಗಿದೆ.