newsics.com
ತುಮಕೂರು: ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಇಬ್ಬರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ
ತಿಪಟೂರು ಸಮೀಪದ ಮತ್ತಿಹಳ್ಳಿ ಬಳಿ ಈ ದುರಂತ ಸಂಭವಿಸಿದೆ. ಬಸ್ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಕಾರು ಅರಸೀಕೆರೆ ಕಡೆ ಹೊರಟಿತ್ತು.
ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ