Thursday, December 9, 2021

ಕೆಎಸ್ಸಾರ್ಟಿಸಿ ಮಾಸಿಕ ಪಾಸ್ ಅವಧಿ ವಿಸ್ತರಣೆ

Follow Us

ಬೆಂಗಳೂರು: ಮಾಸಿಕ ಪಾಸ್ ಅವಧಿಯನ್ನು ವಿಸ್ತರಿಸಿ ಕೆಎಸ್ಸಾರ್ಟಿಸಿ ಆದೇಶಿಸಿದೆ. ಇದು ನಿಗಮದ ವ್ಯಾಪ್ತಿಯ ಎಲ್ಲ 16 ಜಿಲ್ಲೆಗಳಿಗೂ ಅನ್ವಯ ಆಗಲಿದೆ.
ಸುಮಾರು 55 ಸಾವಿರ ಜನ ಮಾಸಿಕ ಪಾಸ್ ಪಡೆದು ಪ್ರಯಾಣಿಸುತ್ತಾರೆ. ಪಾಸಿನ ದರ 300 ರೂ.ಗಳಿಂದ ಗರಿಷ್ಠ 2,500 ರೂ.ವರೆಗೂ ಇದೆ. ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ 1,000-1,200 ರೂ. ಒಳಗಿನ ಪಾಸು ಹೊಂದಿದ ಪ್ರಯಾಣಿಕರಿದ್ದಾರೆ. ಪಾಸು ವಿತರಿಸಿದ ದಿನಾಂಕದಿಂದ 30 ದಿನಗಳು ಪ್ರಯಾಣಿಸಲು ಅವಕಾಶ ಇರುತ್ತದೆ. ಅದನ್ನು ಆಧರಿಸಿ ವಿಸ್ತರಣಾ ಅವಧಿ ನವೀಕರಿಸಲಾಗುತ್ತದೆ ಎಂದು ಕೆಎಸ್ಸಾರ್ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕ ಪ್ರಭಾಕರ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಮಾರ್ಚ್ 10ರಂದು ಪಾಸ್ ಪಡೆದಿದ್ದರೆ, ಅಲ್ಲಿಂದ 30 ದಿನಗಳು ಮಾಸಿಕ ಪಾಸಿನ ಅವಧಿ ಆಗಿರುತ್ತದೆ. ಆದರೆ, ಲಾಕ್‍ಡೌನ್‍ನಿಂದ ಕೇವಲ ಹತ್ತು ದಿನಗಳು ಪಾಸ್ ಬಳಕೆ ಆಗಿರುತ್ತದೆ. ಅಂತಹವರಿಗೆ ಬಸ್ ಸೇವೆ ಪುನಾರಂಭಗೊಂಡ ನಂತರ 20 ದಿನ ಮಾರ್ಚ್ ತಿಂಗಳ ಪಾಸ್ ನಲ್ಲೇ ೨೦ ಪ್ರಯಾಣಿಸಬಹುದು. ನವೀಕರಿಸಿದ ಮುದ್ರೆ ಹಾಕಿ, ಪ್ರಯಾಣಿಸಲು ಅವಕಾಶ ನೀಡಲಾಗುವುದು. ಇದಕ್ಕೆ ಯಾವುದೇ ಶುಲ್ಕ ಇರುವುದಿಲ್ಲ. ಈ ಸೇವೆ ಆಯಾ ಬಸ್ ನಿಲ್ದಾಣದ ನಿಯಂತ್ರಕರಲ್ಲೇ ಲಭ್ಯ ಇರಲಿದೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!