newsics.com
ಮಂಗಳೂರು: ಭಾರೀ ಮಳೆಯಾಗುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು ಬಿದ್ದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಈ ದುರಂತ ಸಂಭವಿಸಿದೆ.
ಮೃತರು ಕೇರಳ ಮೂಲದ ಕಾರ್ಮಿಕರಾಗಿದ್ದಾರೆ. ರಬ್ಬರ್ ತೋಟದ ಕೆಲಸಕ್ಕೆ ಬಂದಿದ್ದ ಕಾರ್ಮಿಕರು ಶೆಡ್ ನಲ್ಲಿ ವಾಸ್ತವ್ಯ ಹೂಡಿದ್ದರು. ಭಾರೀ ಮಳೆಯ ಕಾರಣ ರಬ್ಬರ್ ತೋಟದ ಗುಡ್ಡ ಜರಿದು ಬಿದ್ದ ಪರಿಣಾಮ ಎಲ್ಲರೂ ಭೂ ಸಮಾಧಿಯಾಗಿದ್ದರು.
ಮೃತಪಟ್ಟವರನ್ನು ಬಿಜು, ಬಾಬು ಮತ್ತು ಸಂತೋಷ್ ಎಂದು ಗುರುತಿಸಲಾಗಿದೆ. ಮಳೆಯ ಜತೆ ಜತೆಗೆ ಕರಾವಳಿಯಲ್ಲಿ ಕಡಲ್ಕೊರೆತ ಕೂಡ ತೀವ್ರವಾಗಿದೆ
ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ, ಕರಾವಳಿಯಲ್ಲಿ ರೆಡ್ ಅಲರ್ಟ್