ಉಡುಪಿ: ಅಜ್ಜರಕಾಡು ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 1:30 ರವರೆಗೆ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಥಳದಲ್ಲಿದ್ದು ವ್ಯವಸ್ಥೆ ಪರಿಶೀಲಿಸುತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಹಲವಾರು ಗಣ್ಯರು, ಮಠಾಧೀಶರು ಶ್ರೀಗಳ ಅಂತಿಮ ದರ್ಶನ ಪಡೆಯಲಿದ್ದಾರೆ.
ಕೃಷ್ಣ ಮಠದಲ್ಲಿ ಧಾರ್ಮಿಕ ಪ್ರಕ್ರಿಯೆ ಮುಗಿಸಿ ಕೆಲವೆ ಗಂಟೆಗಳಲ್ಲಿ ಶ್ರೀಗಳ ಪಾರ್ಥಿವ ಶರೀರ ಅಜ್ಜರಕಾಡು ಮೈದಾನ ತಲುಪಲಿದೆ.
ಅಜ್ಜರಕಾಡು ಮೈದಾನದಲ್ಲಿ ಶ್ರೀಗಳ ಅಂತಿಮದರ್ಶನ
Follow Us