newsics.com
ಬೆಂಗಳೂರು : ವಿಧಾನಪರಿಷತ್ ಚುನಾವಣೆಗೆ ಬಿಜೆಪಿಯಿಂದ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಹೊರಬಿದ್ದಿದೆ. ಛಲವಾದಿ ನಾರಾಯಣ ಸ್ವಾಮಿ, ಲಕ್ಷ್ಮಣ ಸವದಿ, ಹೇಮಲತಾ ನಾಯಕ್, ಬಸವರಾಜ ಹೊರಟ್ಟಿ ಹಾಗೂ ಎಸ್. ಕೇಶವಪ್ರಸಾದ್ಗೆ ಎಂಎಲ್ಸಿ ಟಿಕೆಟ್ ಫೈನಲ್ ಆಗಿದೆ.
ಈ ಬಾರಿ ಬಿಜೆಪಿಯಿಂದ ಪರಿಷತ್ ಚುನಾವಣೆಗೆ ಬಿ.ವೈ ವಿಜಯೇಂದ್ರ ಕಣಕ್ಕಿಳಿಯುತ್ತಾರೆ ಎಂದು ಹೇಳಲಾಗಿತ್ತು. ಆದರೆ ವಿಜಯೇಂದ್ರರ ಈ ಲೆಕ್ಕಾಚಾರ ತಲೆ ಕೆಳಗೆ ಮಾಡಿದ ಬಿಜೆಪಿ ಹೈಕಮಾಂಡ್ ಎಂಎಲ್ಸಿ ಟಿಕೆಟ್ ನೀಡದೇ ಹೊಸ ಮುಖಗಳಿಗೆ ಅವಕಾಶ ನೀಡಿದೆ.