newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿ ಚಿರತೆ ಭೀತಿ ಎದುರಾಗಿದೆ. ನೈಸ್ ರಸ್ತೆಯ ಕೂಡಿಗೆ ಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೂಂಗಡಿಪುರ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿದೆ. ನಾಯಿಯನ್ನು ಕೊಂದು ಹಾಕಿದೆ.
ಇಂದು ಕೂಡ ಚಿರತೆ ಓಡಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. 15 ದಿನಗಳ ಹಿಂದೆ ಕೂಡ ಇದೇ ಪರಿಸರದಲ್ಲಿ ಚಿರತೆ ಮರಿ ಕಾಣಿಸಿಕೊಂಡಿತ್ತು.
ಚಿರತೆ ಭೀತಿಯಿಂದ ಗ್ರಾಮಸ್ಥರು ಮನೆಯಿಂದ ಹೊರಗೆ ಬರಲು ಹಿಂಜರಿಯುತ್ತಿದ್ದಾರೆ. ರಾತ್ರಿ ಎಂಟು ಗಂಟೆ ಬಳಿಕ ಮನೆಯಿಂದ ಹೊರ ಬರುವುದೇ ಅಪಾಯ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಇದೇ ವೇಳೆ ಮಂಡ್ಯ ಜಿಲ್ಲೆಯ ಮಳವಳ್ಳಿ ಯಲ್ಲಿ ಕೂಡ ಚಿರತೆ ದಾಳಿ ಮಾಡಿದ ಪ್ರಕರಣ ವರದಿಯಾಗಿದೆ