Monday, October 3, 2022

ಚಿರತೆ, ಕರಡಿ ಕಾಟ; 15 ದಿನ ಅಂಜನಾದ್ರಿ ಬೆಟ್ಟಕ್ಕೆ ಪ್ರವೇಶ ನಿಷೇಧ

Follow Us

newsics.com
ಗಂಗಾವತಿ(ಕೊಪ್ಪಳ): ಚಿರತೆ, ಕರಡಿ ಕಾಟ ಹಿನ್ನೆಲೆಯಲ್ಲಿ ನ.12 ರಿಂದ 15 ದಿನಗಳ ಕಾಲ ಆನೆಗೊಂದಿ ಅಂಜನಾದ್ರಿ ಬೆಟ್ಟಕ್ಕೆ ಸಾರ್ವಜನಿಕರ ಭೇಟಿಯನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಅಂಜನಾದ್ರಿ ಬೆಟ್ಟದ ಶ್ರೀಆಂಜನೇಯಸ್ವಾಮಿ ದೇಗುಲ, ಪಂಪಾಸರೋವರ, ಆದಿಶಕ್ತಿ ದೇಗುಲ ಮತ್ತು ಋಷಿಮುಖ ಪರ್ವತ ಸುಗ್ರೀವಾಂಜನೇಯ ದೇಗುಲಗಳನ್ನು ಬಂದ್ ಮಾಡಲು ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಆನೆಗೊಂದಿ ಅಂಜನಾದ್ರಿ ಬೆಟ್ಟದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಎರಡು ತಿಂಗಳಿಂದ ಚಿರತೆ, ಕರಡಿಗಳ ಹಾವಳಿ ಹೆಚ್ಚಾಗಿದ್ದು ಆದಿಶಕ್ತಿ ದೇಗುಲದ ಕೆಲಸಗಾರರನ್ನು ಚಿರತೆ ಕೊಂದುಹಾಕಿತ್ತು. ಜಂಗ್ಲಿ ರಂಗಾಪೂರದ ಮಹಿಳೆ ಹಾಗೂ ಪ್ರವಾಸಕ್ಕೆ ಆಗಮಿಸಿದ್ದ ಹೈದ್ರಾಬಾದ್ ಬಾಲಕನೋರ್ವನನ್ನು ಚಿರತೆ ಗಾಯಗೊಳಿಸಿತ್ತು.
ಸುತ್ತಲಿನ ಗ್ರಾಮಗಳಲ್ಲಿ ಚಿರತೆ, ಕರಡಿಗಳು ಪ್ರತ್ಯಕ್ಷವಾಗುತ್ತಿದ್ದು ಜನರು ಭಯಭೀತರಾಗಿದ್ದಾರೆ. ಚಿರತೆ ಕರಡಿಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಕ್ರಮ ಕೈಗೊಂಡಿದ್ದು ಡ್ರೋಣ್ ಮತ್ತು ಸಿಸಿ ಕ್ಯಾಮರಾಗಳ ಮೂಲಕ ಚಿರತೆ ಕರಡಿಗಳ ಜಾಗ ಪತ್ತೆ ಮಾಡಲಾಗುತ್ತಿದೆ. ಚಿರತೆ, ಕರಡಿಗಳ ಸೆರೆ ಬಳಿಕ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಲಾಗುತ್ತದೆ ಎಂದು‌ ಜಿಲ್ಲಾಡಳಿತ ಆದೇಶದಲ್ಲಿ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!