newsics.com
ಬೆಂಗಳೂರು: ಮಧ್ಯರಾತ್ರಿ ಸಿಕ್ಕ ಸ್ವಾತಂತ್ರ್ಯವನ್ನು ಹಗಲಿರುಳೂ ಕಾಯೋಣ, ವರ್ಷವಿಡೀ ಆಚರಿಸೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ವಿಧಾನಸೌಧದ ವೈಭವೋಪೇತ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಮಾರಂಭಕ್ಕೆ ಚಾಲನೆ ನೀಡಿದ ಅವರು, ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ಇಡೀ ವರ್ಷ ಆಚರಿಸೋಣ ಎಂದರು.
ಕಾರ್ಯಕ್ರಮದಲ್ಲಿ ಧಾರವಾಡ ರಂಗಾಯಣದ ಕಲಾವಿದರು ‘ದಂಡಿಯಾತ್ರೆ’ ಮತ್ತು ‘ವೀರರಾಣಿ ಕಿತ್ತೂರು ಚೆನ್ನಮ್ಮ’ ಕಿರು ನಾಟಕಗಳನ್ನು ಪ್ರಸ್ತುತಪಡಿಸಿದರು. ಶಿವಮೊಗ್ಗ ರಂಗಾಯಣದ ಕಲಾವಿದರು ‘ಏಸೂರು ಕೊಟ್ಟರೂ ಈಸೂರು ಬಿಡೆವು’ ಮತ್ತು ‘ವಿದುರಾಶ್ವತ್ಥ’ ನಾಟಕಗಳನ್ನು ಪ್ರದರ್ಶಿಸಿದರು. ರಾಜ್ಯದ ವಿವಿಧ ಜಿಲ್ಲೆಗಳ ಕಲಾವಿದರು ವೀರಗಾಸೆ, ಡೊಳ್ಳು ಕುಣಿತ, ಪೂಜಾ ಕುಣಿತ, ಕೀಲು ಕುದರೆ ಮತ್ತಿತರ ಜಾನಪದ ನೃತ್ಯಗಳನ್ನು ಪ್ರಸ್ತುತಪಡಿಸಿದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವ: ಒಂದೂವರೆ ಕೋಟಿ ಭಾರತೀಯರಿಂದ ರಾಷ್ಟ್ರಗೀತೆ
ಭಾರತೀಯ ಅಥ್ಲೀಟ್ಸ್’ಗಳ ಸಾಧನೆ ಯುವ ಪೀಳಿಗೆಗೆ ಸ್ಪೂರ್ತಿ-ರಾಷ್ಟ್ರಪತಿ ರಾಮನಾಥ್ ಕೋವಿಂದ್
ಹಿರಿಯ ಯಕ್ಷಗಾನ ಪ್ರಸಂಗಕರ್ತ, ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಇನ್ನಿಲ್ಲ