Monday, March 1, 2021

ಆರ್ಥಿಕತೆ ಆಧಾರಿತ ಮೀಸಲಾತಿ ಜಾರಿಯಾಗಲಿ

newsics.com
ಬೆಂಗಳೂರು: ಯಾವುದೇ ಸಮುದಾಯಕ್ಕೆ ಮೀಸಲಾತಿ ಸಿಗುವುದಾದರೆ ಅರ್ಥಿಕ ಮಾನದಂಡದ ಮೇಲೆ ನಿರ್ಧಾರವಾಗಬೇಕೆಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲೇ 1.36 ಕೋಟಿ ಬಡತನರೇಖೆಗಿಂತ ಕೆಳಗಿರುವ ಬಡವರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಇದರಲ್ಲಿ ಎಷ್ಟು ಮಂದಿ ಬಡವರಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ. ಆರ್ಥಿಕ ವ್ಯವಸ್ಥೆ ನೋಡಿಕೊಂಡು ಮೀಸಲಾತಿ ನೀಡುವುದು ಸೂಕ್ತ ಎಂದು ಸಲಹೆ ನೀಡಿದರು.
ಮಂತರು ಮತ್ತು ಬಡವರು ಎಂಬುದರ ನಡುವೆ ಮೀಸಲಾತಿ ಇರಬೇಕು. ಅದರಲ್ಲೂ ಮುಖ್ಯವಾಗಿ ಬಡವರಿಗೆ ಮೀಸಲಾತಿ ಸಿಗಬೇಕು ಎಂದರು. ಜಾತಿ ಜಾತಿಗಳ ನಡುವೆ ಮೀಸಲಾತಿ ಹೋರಾಟಕ್ಕೆ ಈಗಲೂ ನನ್ನ ವಿರೋಧವಿದೆ. ಕೆಲವು ಸ್ವಾಮೀಜಿಗಳು ಈ ಹೋರಾಟದಲ್ಲಿ ಭಾಗಿಯಾಗಿರುವುದು ನನ್ನ ಗಮನಕ್ಕೆ ಬಂದಿದೆ. ಸ್ವಾಮೀಜಿಗಳ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಅನಗತ್ಯವಾಗಿ ದೊಡ್ಡವರ ಬಗ್ಗೆ ಮಾತನಾಡಬಾರದೆಂದು ಹೇಳಿದರು.
ಮೊಬೈಲ್‍ ನಿಷೇಧ:
ಮಾರ್ಚ್ 4ರಂದು ಆರಂಭವಾಗಲಿರುವ ಬಜೆಟ್ ಅಧಿವೇಶನದಲ್ಲಿ ಈ ಬಾರಿ ಶಾಸಕರು ಸೇರಿದಂತೆ ಮತ್ತಿತರರಿಗೆ ಸದನದಲ್ಲಿ ಮೊಬೈಲ್ ತರುವುದಕ್ಕೆ ಸಂಪೂರ್ಣವಾಗಿ ನಿಷೇಧ ಹೇರಲಾಗುವುದು. ಕಲಾಪ ನಡೆಯುವ ವೇಳೆ ಇವುಗಳಿಂದ ಕಿರಿಕಿರಿ ಉಂಟಾಗುತ್ತದೆ ಎಂದರು.

ಜಿಂಕೆಯಲ್ಲೂ ಕಾಣಿಸಿಕೊಂಡ ಹೊಸ ರೋಗ

ಪೊಗರು ಚಿತ್ರದ ವಿವಾದಿತ ದೃಶ್ಯಕ್ಕೆ ಕತ್ತರಿ ಎಂದ ನಿರ್ದೇಶಕ

ನಾಳೆಯೇ ಮೈಸೂರು ಮೇಯರ್ ಚುನಾವಣೆ; ಹೈಕೋರ್ಟ್’ನಿಂದ ಹಸಿರು ನಿಶಾನೆ

ಮತ್ತಷ್ಟು ಸುದ್ದಿಗಳು

Latest News

ಕಾಡಾನೆ ಜತೆ ಸೆಲ್ಪಿ ತೆಗೆಯಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

newsics.com ರಾಂಚಿ:  ಛತ್ತೀಸ್ ಗಢದಲ್ಲಿ ಕಾಡಾನೆ ಜತೆ ಸೆಲ್ಪಿ ತೆಗೆಯಲು ಯತ್ನಿಸಿದ ಯವಕ ಆನೆ ದಾಳಿಯಿಂದ ಪ್ರಾಣ ಕಳೆದುಕೊಂಡಿದ್ದಾನೆ. ಮೃತಪಟ್ಟ ಯುವಕನನ್ನು  ಮನೋಹರ್ ಪಟೇಲ್ ಎಂದು ಗುರುತಿಸಲಾಗಿದೆ. ರಾಯಗಢ...

ಅಸ್ಸಾಂನಲ್ಲಿ ಅಪಘಾತ: ಮೈಸೂರಿನ ಯೋಧ ಸಾವು

newsics.com ಗುವಾಹಟಿ:  ಅಸ್ಸಾಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೈಸೂರು ಮೂಲದ ಯೋಧರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.  ಮೃತಪಟ್ಟ ಯೋಧನನ್ನು ತಿ. ನರಸಿಪುರ ತಾಲೂಕಿನ  ಬೆಟ್ಟಹಳ್ಳಿ ಗ್ರಾಮದ ಮೋಹನ್ ಎಂದು ಗುರುತಿಸಲಾಗಿದೆ. ಕಳೆದ 10 ವರ್ಷದಿಂದ ಅವರು...

ತಿರುಪತಿ ಪ್ರವೇಶಿಸದಂತೆ ಚಂದ್ರಬಾಬು ನಾಯ್ಡುಗೆ ನಿರ್ಬಂಧ

newsics.com ತಿರುಪತಿ: ತೆಲುಗು ದೇಶಂ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಜು ಗೆ ತಿರುಪತಿ ಪ್ರವೇಶಿಸದಂತೆ ಪೊಲೀಸರು ತಡೆ ಒಡ್ಡಿದ್ದಾರೆ. ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಣಿಗುಂಟ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು...
- Advertisement -
error: Content is protected !!