ಬೆಂಗಳೂರು: ಇಂದು ಮುಂಜಾನೆ 5ಗಂಟೆಗೆ ಲಾಕ್ ಡೌನ್ ತೆರವುಗೊಂಡಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಜನಜೀವನ ನಿಧಾನವಾಗಿ ಸಹಜಸ್ಥಿತಿಗೆ ಮರಳುತ್ತಿದೆ. ಕೆಎಸ್ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಗಳು ಸಂಚಾರ ಆರಂಭಿಸಿವೆ. ಬೆಳಿಗ್ಗೆ ಆರು ಗಂಟೆಯಿಂದ ರಾತ್ರಿ ಎಂಟು ಗಂಟೆ ತನಕ ಬಸ್ ಗಳು ಸಂಚಾರ ನಡೆಸಲಿವೆ
ಊರಿಗೆ ತೆರಳಿದ್ದ ಹಲವು ಮಂದಿ ಬೆಂಗಳೂರಿಗೆ ಹಿಂತಿರುಗುತ್ತಿದ್ದಾರೆ. ಇದೇ ವೇಳೆ ರಾಜಧಾನಿಯಲ್ಲಿ ಕೊರೋನಾ ನಿಯಂತ್ರಿಸುವ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಇಂದಿನಿಂದ ಮೂರು ದಿನಗಳ ಕಾಲ ವಲಯ ಉಸ್ತುವಾರಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ. ಜುಲೈ 24ರ ತನಕ ಇದು ಮುಂದುವರಿಯಲಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಇನ್ನು ಮುಂದೆ ಲಾಕ್ ಡೌನ್ ಇರಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಆದರೆ ಕೊರೋನಾ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದೆ.