newsics.com
ದಕ್ಷಿಣ ಕನ್ನಡ/ಕೊಡಗು; ತಡರಾತ್ರಿ 1.15 ವೇಳೆ ಮತ್ತೆ ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ ಭೂಮಿ ಕಂಪಿಸಿದೆ. ಸುಳ್ಯದ ಸಂಪಾಜೆ, ಚೆಂಬು, ಕಲ್ಲುಗುಂಡಿ ಗಡಿಭಾಗ ಹಾಗೂ ಕೊಡಗಿನ ಗಡಿಭಾಗಗಳು ಸೇರಿದಂತೆ ಸುಳ್ಯ ತಾಲೂಕಿನ ವಿವಿಧ ಕಡೆ ಲಘು ಭೂಕಂಪದ ಅನುಭವವಾಗಿದೆ.
ಕಳೆದ ಒಂದು ವಾರದಲ್ಲಿ ಕೊಡಗು ಹಾಗೂ ಸುಳ್ಯ ತಾಲೂಕಿನ ವಿವಿಧ ಕಡೆ ನಾಲ್ಕನೇ ಬಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಗೊಂಡಿದ್ದಾರೆ.