Saturday, November 28, 2020

ಲಿಂಗರಾಜು ಹತ್ಯೆ; BBMP ಮಾಜಿ ಕಾರ್ಪೊರೇಟರ್​ ಸೇರಿ 12 ಮಂದಿಗೆ ಜೀವಾವಧಿ ಶಿಕ್ಷೆ

newsics.com
ಬೆಂಗಳೂರು: ಆರ್​ಟಿಐ ಕಾರ್ಯಕರ್ತ ಲಿಂಗರಾಜು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಮಾಜಿ ಕಾರ್ಪೊರೇಟರ್​ ಗೌರಮ್ಮ ಸೇರಿ 12 ಜನರಿಗೆ ಕೋರ್ಟ್ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿದೆ.
ಬೆಂಗಳೂರು ನಗರದ 59ನೇ ಸಿಸಿಎಚ್ ಕೋರ್ಟ್ ನ್ಯಾಯಾಧೀಶರಾದ ನ್ಯಾ.ಲಕ್ಷ್ಮೀನಾರಾಯಣ ಈ ತೀರ್ಪು ನೀಡಿದ್ದಾರೆ.
ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಗೌರಮ್ಮ, ಪತಿ ಗೋವಿಂದರಾಜು, ರಂಗಸ್ವಾಮಿ, ಶಂಕರ್, ರಾಘವೇಂದ್ರ, ಚಂದ್ರ, ಶಂಕರ, ಉಮಾಶಂಕರ್, ಭವಾನಿ, ವೇಲು, ಲೋಗನಾಥ, ಜಾಹೀರ್ ಹಾಗೂ ಸುರೇಶ್ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ.
ಅಂದಿನ ಕಾರ್ಪೊರೇಟರ್ ಗೌರಮ್ಮ ಅವರ ಅಕ್ರಮ ಯೋಜನೆಗಳನ್ನು ಆರ್‍ಟಿಐ ಕಾರ್ಯಕರ್ತರಾದ ಲಿಂಗರಾಜು ಅವರು ಪ್ರಶ್ನೆ ಮಾಡಿದ್ದರು. ಇದಕ್ಕೆ ಅವರನ್ನು ಸುಫಾರಿ ಕೊಟ್ಟು ಕೊಲೆ ಮಾಡಲಾಗಿತ್ತು.
ಈ ಪ್ರಕರಣದ ವಿಚಾರಣೆ ಎಂಟು ವರ್ಷಗಳ ಕಾಲ ನಡೆದಿತ್ತು. ನಿನ್ನೆ ಸೆಷನ್ ನ್ಯಾಯಾಲಯ ಆರೋಪಿಗಳನ್ನು ದೋಷಿಗಳೆಂದು ತೀರ್ಮಾನಿಸಿ ಶಿಕ್ಷೆಯ ಪ್ರಮಾಣವನ್ನು ಇಂದು ಪ್ರಕಟಿಸುವುದಾಗಿ ತಿಳಿಸಿತ್ತು. ಇಂದು ಶಿಕ್ಷೆ ಪ್ರಕಟಿಸಿದ ನ್ಯಾಯಾಧೀಶರಾದ ನ್ಯಾ. ಲಕ್ಷ್ಮೀನಾರಾಯಣ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಲ್ಲರಿಗೂ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿದ್ದಾರೆ. ಪೊಲೀಸರು ನ್ಯಾಯಾಲಯಕ್ಕೆ 4500 ಪುಟಗಳ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. 134 ಸಾಕ್ಷಿಗಳ ವಿಚಾರಣೆ ನಡೆಸಿ ಎಲ್ಲ 12 ಆರೋಪಿಗಳಿಗೆ ಶಿಕ್ಷೆಯನ್ನು ನ್ಯಾಯಾಧೀಶರು ಪ್ರಕಟಿಸಿದ್ದಾರೆ.

ವೈದ್ಯರ ಅಪಹರಿಸಿ 10 ಕೋಟಿ ರೂಪಾಯಿಗೆ ಬೇಡಿಕೆ: ಏಳು ಆರೋಪಿಗಳ ಬಂಧನ

ಕೊರೋನಾದಿಂದ ಹೆಚ್ಚಾಯ್ತು ಪಾರ್ಶ್ವವಾಯು ಸಮಸ್ಯೆ

‘ಇಗ್ನೋ’ದ ಡಿಸೆಂಬರ್ ಪರೀಕ್ಷೆಗಳು ಫೆಬ್ರವರಿಗೆ ಮುಂದೂಡಿಕೆ

ನಾಳೆ ಸಪ್ತಪದಿ ತುಳಿಯಲಿರುವ ನಟಿ ಕಾಜಲ್ ಅಗರ್ವಾಲ್

2022ರ ವೇಳೆಗೆ NISAR ಉಡಾವಣೆಗೆ ನಾಸಾ-ಇಸ್ರೋ ನಿರ್ಧಾರ

ಕಾಲೇಜು ವಿದ್ಯಾರ್ಥಿನಿ ನಿಕಿತಾ ಹತ್ಯೆ ಪ್ರಕರಣ: ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆ

ನೀರಿನಲ್ಲಿ ಕೊಚ್ಚಿ ಹೋದ ಆರು ಬಾಲಕರು, ಮೂರು ಶವಪತ್ತೆ

ಮತ್ತಷ್ಟು ಸುದ್ದಿಗಳು

Latest News

ಸಿಎಂ ಬಿಎಸ್ವೈ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ, ಆಸ್ಪತ್ರೆಗೆ ದಾಖಲು

newsics.com ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಶುಕ್ರವಾರ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಸಂತೋಷ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಬೆಂಗಳೂರಿನ ಎಮ್.ಎಸ್....

ಇರಾನ್‌ನ ಹಿರಿಯ ಪರಿಮಾಣು ವಿಜ್ಞಾನಿ ಮುಹ್ಸಿನ್ ಹತ್ಯೆ

newsics.com ಟೆಹ್ರಾನ್: ಇರಾನ್‌ನ ಹಿರಿಯ ಪರಿಮಾಣು ವಿಜ್ಞಾನಿ ಮುಹ್ಸಿನ್ ಫಖ್ರಿಝಾದೆಹ್ ಅವರನ್ನು ಶುಕ್ರವಾರ ಹತ್ಯೆಗೈಯಲಾಗಿದೆ ಎಂದು ಇಸ್ರೇಲ್‌ನ ರಕ್ಷಣಾ ಸಚಿವಾಲಯ ತಿಳಿಸಿದೆ.ಟೆಹ್ರಾನ್‌ನ ಸಮೀಪ ಈ ಹತ್ಯೆ ನಡೆದಿದೆ ಎಂದು ಇಸ್ರೇಲ್‌ನ...

ಮುಂಬೈನಲ್ಲಿ ದಾರಿ ತಪ್ಪಿದ್ದ ಸಚಿನ್ ತೆಂಡೂಲ್ಕರ್!

newsics.com ಬೆಂಗಳೂರು: ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್ ಇತ್ತೀಚೆಗೆ ಮುಂಬೈನಲ್ಲಿ ದಾರಿ ತಪ್ಪಿದ್ದರಂತೆ. ಆಗ ಆಟೋವಾಲಾ ಒಬ್ಬರು ನೆರವಿಗೆ ಬಂದಿದ್ದರಿಂದ ಮನೆ ತಲುಪಲು ಸಾಧ್ಯವಾಯಿತು ಎಂದು ಹೇಳಿಕೊಂಡಿದ್ದಾರೆ.ಈ ವರ್ಷದ ಜನವರಿಯಲ್ಲಿ...
- Advertisement -
error: Content is protected !!