newsics.com
ಹಾವೇರಿ: ಬೆಳೆ ನಷ್ಟ ಹಿನ್ನೆಲೆಯಲ್ಲಿ ಸಾಲ ಮಾಡಿಕೊಂಡಿದ್ದ ರೈತರೊಬ್ಬರು ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುತ್ತಲ ಸಮೀಪದ ತೇರದಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಸಣ್ಣದುರಗಪ್ಪ ಗೊರವರ (58) ಆತ್ಮಹತ್ಯೆ ಮಾಡಿಕೊಂಡ ರೈತ. ಬೆಳವಗಿ ಗ್ರಾಮದ ಕೆವಿಜಿ ಬ್ಯಾಂಕ್ ಮತ್ತು ಕೈಗಡವಾಗಿ 4 ಲಕ್ಷ ರೂ. ಸಾಲ ಮಾಡಿದ್ದರು. ಎರಡು ವರ್ಷಗಳಿಂದ ಬೆಳೆ ಸರಿಯಾಗಿ ಬಾರದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗುತ್ತಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮರುಜನ್ಮ ನೀಡುವುದಾಗಿ ವ್ಯಕ್ತಿ ಕೊಂದ ಮಾಂತ್ರಿಕನಿಂದ ದಿನವಿಡೀ ಪೂಜೆ, ಬದುಕದ್ದಕ್ಕೆ ಪ್ರತಿಭಟನೆ