newsics.com
ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
5 ನಗರ ಸಭೆ, 19 ಪುರಸಭೆ ಹಾಗೂ 34 ಪಟ್ಟಣ ಪಂಚಾಯಿತಿಗಳ 1185 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ಡಿಸೆಂಬರ್ 16 ಕೊನೆಯ ದಿನವಾಗಿದ್ದು, ನಾಪಪತ್ರ ವಾಪಸ್ ಪಡೆಯಲು ಡಿಸೆಂಬರ್ 18 ಕೊನೆಯ ದಿನವಾಗಿದೆ.
ಕೊರೋನಾ ತಡೆಗಟ್ಟಿವ ನಿಯಮಗಳನ್ನು ಪಾಲಿಸಿಕೊಂಡು ಚುನಾವಣೆ ನಡೆಸುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ.