Saturday, April 17, 2021

ಬೆಂಗಳೂರಲ್ಲಿ ಬುಧವಾರದಿಂದ ಒಂದು ವಾರ ಲಾಕ್ ಡೌನ್

ಬೆಂಗಳೂರು: ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಬುಧವಾರ(ಜುಲೈ 15) ಬೆಳಗ್ಗೆಯಿಂದ ಒಂದು ವಾರ ಲಾಕ್ ಡೌನ್ ಘೋಷಿಸಲು ಸರ್ಕಾರ ನಿರ್ಧರಿಸಿದೆ.
ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಜು.14ರ ರಾತ್ರಿ 8 ರಿಂದ ಜು.22ರ ಬೆಳಗ್ಗೆ 5ರವರೆಗೆ ಲಾಕ್ ಡೌನ್ ಎಂದು ಸಿಎಂ ಕಚೇರಿ ಪರಿಷ್ಕರಿಸಿದ ಪ್ರಕಟಣೆ ಹೇಳುತ್ತಿದ್ದರೂ, ಈಗಾಗಲೇ ಸರ್ಕಾರವೇ ರಾತ್ರಿ ಕರ್ಫ್ಯೂ ಜಾರಿಗೊಳಿಸಿರುವುದರಿಂದ ಒಂದು ವಾರದ ಲಾಕ್ ಡೌನ್ ಬುಧವಾರ ಬೆಳಗ್ಗೆಯಿಂದ ಅನ್ವಯವಾಗಲಿದೆ.
ರಾಜ್ಯದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳು, ಸಚಿವರೊಂದಿಗೆ ಸಿಎಂ ಸಮಾಲೋಚನೆ ನಡೆಸಿದ್ದು ಬೆಂಗಳೂರಿನಲ್ಲಿ ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಒಂದು ವಾರ ಲಾಕ್ ಡೌನ್ ಜಾರಿ ಮಾಡುವ ಬಗ್ಗೆ ಚರ್ಚೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ.
ಬೆಂಗಳೂರಿನಲ್ಲಿ ಬುಧವಾರದಿಂದ ಮುಂದಿನ ಒಂದು ವಾರ ಲಾಕ್ಡೌನ್ ಜಾರಿ ಮಾಡಲಾಗುವುದು. ಉಳಿದಂತೆ ಕೊರೋನಾ ಸೋಂಕು ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಲಾಕ್ಡೌನ್ ಜಾರಿ ಮಾಡುವ ಕುರಿತು ಜಿಲ್ಲಾಧಿಕಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
ಉನ್ನತ ಮಟ್ಟದ ಸಭೆಯಲ್ಲಿ ಮುಂದಿನ ಬುಧವಾರದಿಂದ ಒಂದು ವಾರ ಲಾಕ್ ಡೌನ್ ಜಾರಿ ಮಾಡುವ ಬಗ್ಗೆ ಮಹತ್ವದ ಚರ್ಚೆ ನಡೆಸಿ ಸಿಎಂ ಈ ನಿರ್ಧಾರಕ್ಕೆ ಬಂದಿದ್ದಾರೆ. ಲಾಕ್ ಡೌನ್ ಜಾರಿ ಮಾಡುವುದರಿಂದ ಆಗಬಹುದಾದ ಸಮಸ್ಯೆ, ಬೆಳವಣಿಗೆಗಳ ಕುರಿತು ಚರ್ಚೆ ನಡೆದಿದ್ದು, ಸೋಂಕು ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಠಿಣ ಲಾಕ್ ಡೌನ್ ಜಾರಿ ಮಾಡಿ ಉಳಿದೆಡೆ ಯಥಾಸ್ಥಿತಿ ಮುಂದುವರೆಸುವ ಬಗ್ಗೆಯೂ ಚರ್ಚೆ ನಡೆದಿದೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!