Wednesday, July 6, 2022

ಲಾಕ್ ಡೌನ್ ಮುಕ್ತಾಯ; ಅನ್ ಲಾಕ್ ಮಾರ್ಗಸೂಚಿ ಪ್ರಕಟ

Follow Us

ಬೆಂಗಳೂರು: ರಾಜ್ಯ ಹಾಗೂ ಬೆಂಗಳೂರಿನಲ್ಲಿ ಲಾಕ್ ಡೌನ್ ವಿಸ್ತರಣೆ ಇಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದಿಂದ ಅನ್ ಲಾಕ್ ಮಾರ್ಗಸೂಚಿ ಪ್ರಕಟವಾಗಿದೆ.
ರಾಜ್ಯದಲ್ಲಿ ಎಂದಿನಂತೆ ಪ್ರತಿ ಭಾನುವಾರ ಲಾಕ್ ಡೌನ್ ಮುಂದುವರೆಯಲಿದೆ, ಪ್ರತಿದಿನ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಪ್ಯೂ ಜಾರಿಯಲ್ಲಿರಲಿದೆ ಎಂದು ರಾಜ್ಯ ಸರ್ಕಾರ ಮಾರ್ಗಸೂಚಿಯಲ್ಲಿ ಹೇಳಿದೆ.
ಜನದಟ್ಟಣೆ ಇರುವ ಮಾರುಕಟ್ಟೆಗಳ ಸ್ಥಳಾಂತರ ಮಾಡಬೇಕು, ಪ್ರತಿದಿನ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಪ್ಯೂ ಜಾರಿಯಲ್ಲಿರಲಿದೆ ಎಂದು ರಾಜ್ಯ ಸರ್ಕಾರ ಮಾರ್ಗಸೂಚಿಯಲ್ಲಿ ವಿವರಿಸಿದೆ.
ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಮಹತ್ವದ ಕ್ರಮ ಕೈಗೊಂಡಿದೆ. ಬೆಂಗಳೂರಿನಲ್ಲಿ ಹೇರಿಕೆಯಾಗಿದ್ದ 1 ವಾರದ ಲಾಕ್ ಡೌನ್ ಜುಲೈ 22ರಂದು ಬೆಳಗ್ಗೆ 5 ಕ್ಕೆ ತೆರವಾಗಲಿದೆ. ಅಂತೆಯೇ ಕೆಲವು ಜಿಲ್ಲೆಗಳಲ್ಲಿ ಹೇರಿದ್ದ ಲಾಕ್ ಡೌನ್ ಕೂಡ ತೆರವಾಗಲಿದೆ. ಬೆಂಗಳೂರು ಪ್ರದೇಶದಲ್ಲಿ ಜುಲೈ 14ರ ರಾತ್ರಿ 8 ಗಂಟೆಯಿಂದ ಜುಲೈ 22ರ ಬೆಳಿಗ್ಗೆ 5 ಗಂಟೆಗಳವರೆಗೆ ಜಾರಿಯಲ್ಲಿದ್ದ ಲಾಕ್ ಡೌನ್ ನಾಳೆ ಬೆಳಿಗ್ಗೆಗೆ ಮುಕ್ತಾಯಗೊಳ್ಳಲಿದೆ. ಈ ವ್ಯವಸ್ಥೆ ಜುಲೈ 30ರವರೆಗೆ ಹೀಗೆಯೇ ಮುಂದುವರಿಯಲಿದೆ ಎಂದು ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.
ಮಾರ್ಪಾಡುಗೊಂಡ ಅನ್ ಲಾಕ್ 2.0 ಮಾರ್ಗಸೂಚಿಗಳ ಪ್ರಕಾರ ರಾಜ್ಯಾದ್ಯಂತ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಸ್ಥಿತಿ ಜಾರಿಯಲ್ಲಿರುತ್ತದೆ. ಈಗ ಚಾಲ್ತಿಯಲ್ಲಿರುವಂತೆ ಪ್ರತೀ ಭಾನುವಾರದ ಲಾಕ್ ಡೌನ್ ಮುಂದುವರಿಯಲಿದೆ. ಈ ನಿಯಮಗಳಿಗೆ ಪೂರಕವಾಗಿ ಜನಸಂದಣಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರು ಸಹಿತ ರಾಜ್ಯದ ಎಲ್ಲಾ ಜಿಲ್ಲೆಗಳು ಹಾಗೂ ತಾಲೂಕು ಮಟ್ಟಗಳಲ್ಲಿ ತರಕಾರಿ ಮಾರುಕಟ್ಟೆಗಳನ್ನು ಎ.ಪಿ.ಎಂ.ಸಿ. ಅಥವಾ ಸೂಕ್ತ ವಿಶಾಲ ಪ್ರದೇಶಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳುವುದು. ಉದ್ಯಾನವನಗಳಲ್ಲಿ ಜಿಮ್ ಸಲಕರಣೆಗಳು ಹಾಗೂ ಕುಳಿತುಕೊಳ್ಳುವ ಬೆಂಚ್ ಗಳನ್ನು ಸಾರ್ವಜನಿಕರು ಬಳಸದಂತೆ ನಿಗಾ ವಹಿಸುವುದು. ಇವುಗಳೊಂದಿಗೆ ಆಯಾ ಜಿಲ್ಲಾಡಳಿತಗಳ ಪ್ರತ್ಯೇಕ ಮಾರ್ಗಸೂಚಿಗಳು ಪ್ರಕಟಗೊಳ್ಳುವವರೆಗೂ ಅನ್ ಲಾಕ್ 2.0ರ ಮಾರ್ಗಸೂಚಿಯು ಕೆಲ ಬದಲಾವಣೆಗಳೊಂದಿಗೆ ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ.

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!