Thursday, December 1, 2022

RTO ಚೆಕ್‌ ಪೋಸ್ಟ್‌ಗಳ ಮೇಲೆ ಏಕಾಏಕಿ ಲೋಕಾಯುಕ್ತರ ದಾಳಿ!

Follow Us

newsics.com

ಬೆಂಗಳೂರು: ರಾಜ್ಯದ ಹಲವು RTO ಚೆಕ್‌ ಪೋಸ್ಟ್‌ಗಳ ಮೇಲೆ ಬೆಳ್ಳಂ ಬೆಳಗ್ಗೆ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ವಾಹನ ಸವಾರರಿಂದ ಸಂಗ್ರಹಿಸುವ ತೆರಿಗೆ ಹಣದ ವಸೂಲಿಯ ದೂರಿನ ಹಿನ್ನಲೆಯಲ್ಲಿ ರಾಜ್ಯದ ಹಲವು ಕಡೆಯಲ್ಲಿ RTO ಚೆಕ್‌ ಪೋಸ್ಟ್‌ಗಳ ಮೇಲೆ ಲೋಕಾಯಕ್ತರು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಹೊರವಲಯಗಳಾದ ಅತ್ತಿಬೆಲೆ, ಬೀದರ್‌ ಜಿಲ್ಲೆಯ ಹುಮ್ನಾಬಾದ್‌, ಹಾಗೂ ಬಳ್ಳಾರಿಯ ಹಗರಿ ಆರ್‌ಟಿಓ ಸುಂಕ ಕಟ್ಟೆ ಮೇಲೆ ಕೂಡ ದಾಳಿ ನಡೆಸಿದ್ದಾರೆ.

ಬೆಂಗಳೂರು ಹಾಗೂ ಹೊಸದುರ್ಗದ ಕಡೆ  ಟ್ಯಾಕ್ಸ್‌ ಇಲ್ಲದೇ ಓಡಾಡುತ್ತಿರುವ ಖಾಸಗಿ ಬಸ್‌ಗಳ ಮೇಲೆ ಕೂಡ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತ್ರ ಓಡಿಸಲು ಪರವಾನಿಗೆ ಇರುವ ಬಸ್‌ಗಳು, ಬೆಂಗಳೂರಿನ ಹೊರವಲಯವಾದ ಹೊಸದುರ್ಗದ ನಡುವೆ ಓಡಾಟ ನಡೆಸುತ್ತಿದ್ದನ್ನು ಗಮನಿಸಿ ವಶಕ್ಕೆ ಪಡೆದುಕೊಂಡಿದ್ದಾರೆ

ಬೀದರ್‌ , ಕಲ್ಬುರ್ಗಿ ಎಸ್ಪಿ ಪಿ. ಕರ್ನೂಲ್‌ ತಂಡದ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತರ ದಾಳಿ ವೇಳೆ ಒಂದೂವರೆ ಲಕ್ಷ ರೂಪಾಯಿ ಹಣ ಚೆಕ್‌ ಪೋಸ್ಟ್‌ನಲ್ಲಿ ಕಂಡು ಬಂದಿದೆ.   ಹಣ ದಂಡದೋ ಅಥವಾ ಲಂಚದ ಹಣವೋ ಎಂದು ಅಧಿಕಾರಿಗಳು ಪರಿಶೀಲಿಸುವುದಕ್ಕೆ ಪ್ರಾರಂಭಿಸಿದ್ದಾರೆ.

ಬೆಂಗಳೂರು – ಮುಂಬೈ ರಾಷ್ಟೀಯ ಹೆದ್ದಾರಿಯ ನಾಲ್ಕು ಚೆಕ್‌ ಪೋಸ್ಟ್‌ಗಳ ಮೇಲು ಕೂಡ ಅಧಿಕಾರಿಗಳು ದಾಳಿ ನಡೆಸಿದ್ದು. ಆ ಸಮಯದಲ್ಲಿ ಚೆಕ್‌ ಪೋಸ್ಟ್‌ನಲ್ಲಿ ಹಣವಿರುವುದು ಪತ್ತೆಯಾಗಿದೆ.

ಮುರುಘಾ ಶ್ರೀ ಚೆಕ್ ಗಳಿಗೆ ಸಹಿ ಹಾಕಲು ಹೈಕೋರ್ಟ್ ಅನುಮತಿ​

 

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!