newsics.com
ಮಡಿಕೇರಿ: ತಾಲೂಕಿನ ಪೆರಾಜೆ ಗ್ರಾಮದಲ್ಲಿ ಶನಿವಾರ ರಾತ್ರಿ 8.25ರಲ್ಲಿ ಭಾರಿ ಪ್ರಮಾಣದ ಶಬ್ದವು ಭೂಮಿಯಿಂದ ಕೇಳಿ ಬಂದಿದ್ದು, ಗ್ರಾಮಸ್ಥರು ಭೂಕಂಪದ ಭಯದಿಂದ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.
ಚೆಂಬು, ಸಂಪಾಜೆ, ಗೂನಡ್ಕ ಭಾಗಗಳಲ್ಲಿ ಶಬ್ದ ಕೇಳಿ ಬಂದೊಡನೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಆದರೆ ಈ ಕುರಿತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಭೂಕಂಪವೆಂದು ದೃಢಿಕರಿಸಿಲ್ಲ ಎಂದು ಮೂಲಗಳು ತಿಳಿಸಿವೆ.