newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ.
ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು ಗುರುತಿಸಲಾಗಿದೆ. ಕೃಷ್ಣ ಕುಮಾರಿ ಸ್ಪಾ ವೊಂದರಲ್ಲಿ ಕೆಲಸ ಮಾಡುತ್ತಿದ್ದರು.
ಸಂತೋಷ್ ಧಾಮಿ ಎಂಬಾತನ ಜತೆ ಲಿವ್ ಇನ್ ರಿಲೇಶನ್ ಶಿಪ್ ಹೊಂದಿದ್ದಳು ಎಂದು ವರದಿಯಾಗಿದೆ.
ಮಂಗಳವಾರ ಇಬ್ಬರ ಮಧ್ಯೆ ಜಗಳ ನಡೆದಿತ್ತು. ಇದು ವಿಕೋಪಕ್ಕೆ ಹೋಗಿತ್ತು. ಕೃಷ್ಣ ಕುಮಾರಿ ತಲೆಯನ್ನು ಗೋಡೆಗೆ ಅಪ್ಪಳಿಸಿ ಆರೋಪಿ ಕೊಲೆ ಮಾಡಿದ್ದಾನೆ ಎಂದು ಶಂಕಿಸಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.