newsics.com
ಬೆಂಗಳೂರು: ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಬೊಮ್ಮನಹಳ್ಳಿ ನಿವಾಸದ ಮುಂದೆ ಇರಿಸಲಾಗಿದ್ದ ಎರಡು ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.
ದ್ವಿಚಕ್ರವಾಹನದಲ್ಲಿ ಮಧ್ಯರಾತ್ರಿ 1.30ರ ಹೊತ್ತಿಗೆ ಬಂದ ನಾಲ್ಕು ಮಂದಿಯ ತಂಡ ಈ ಕೃತ್ಯ ಎಸಗಿ ಪರಾರಿಯಾಗಿದೆ ಎಂದು ವರದಿಯಾಗಿದೆ.
ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳೀಯ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಲಾಗಿದ್ದು, ತನಿಖೆ ಮುಂದುವರಿದಿದೆ.